ವಿಧಾನ ಪರಿಷತ್ ಚುನಾವಣೆ: ಐದು ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಪ್ರಕಟ, 1 ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ

ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 1 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.

ಉಳಿದ ಐದು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರನ್ನು ಕಣಕ್ಕಳಿಸಿದೆ.

ಸಾಂದರ್ಭಿಕ ಚಿತ್ರ
ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 3 ರಂದು ಮತದಾನ

ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com