ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಪ್ರಧಾನಿ ಮೋದಿಗೆ ಏನು ಅಡ್ಡಿಯಾಗಿದೆ?: ಕಾಂಗ್ರೆಸ್

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದಕ್ಕೆ ಏನು ಅಡ್ಡಿಯಾಗಿದೆ?
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ
Updated on: 

ನವದೆಹಲಿ: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವುದಕ್ಕೆ ಏನು ಅಡ್ಡಿಯಾಗಿದೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಶನಿವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ತನಿಖೆಗೆ ಆದೇಶಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ 33 ವರ್ಷದ ಹಾಸನ ಸಂಸದ ರಾಜತಾಂತ್ರಿಕ ಪಾಸ್‌ಪೋರ್ಟ್ ಮೇಲೆ ಜರ್ಮನಿಗೆ ಹಾರಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಹೇಗೆ ಅವಕಾಶ ನೀಡಲಾಯಿತು ಎಂದು ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಪ್ರಕರಣ: ಬೆದರಿಕೆಯಿಂದಾಗಿ ಸಂತ್ರಸ್ತ ಮಹಿಳೆಯರು SIT ಮುಂದೆ ಹೋಗಲು ಹಿಂದೇಟು- ಡಿ ಕೆ ಶಿವಕುಮಾರ್

"ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಪ್ರಧಾನಿಗೆ ಏನು ಅಡ್ಡಿಯಾಗಿದೆ? ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಂತೆ ದೇಶದಿಂದ ಪಲಾಯನ ಮಾಡಲು ಹೇಗೆ ಮತ್ತು ಏಕೆ ಅವಕಾಶ ನೀಡಲಾಯಿತು?" ಎಂದು ಕಾಂಗ್ರೆಸ್ ಮುಖಂಡ ಪ್ರಶ್ನಿಸಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ, ಏಪ್ರಿಲ್ 26 ರಂದು ಮತದಾನ ನಡೆದ ದಿನವೇ ವಿದೇಶಕ್ಕೆ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com