ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಪರ ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ

ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ನಂತರ ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಬಗ್ಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದರು.

"ನಾನು ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ರಾಯಬರೇಲಿಗೆ ಹೋಗುತ್ತಿದ್ದೇನೆ. ನಾನು ಇಲ್ಲಿ(ಬೆಂಗಳೂರು) ಎರಡು ದಿನ ಇರುವುದಿಲ್ಲ. ನಾನು ಇಂದು ಹೊರಡುತ್ತೇನೆ, ಯಾರೂ ನನ್ನ ನಿವಾಸದ ಬಳಿ ಬರಬಾರದು ಎಂದು ವಿನಂತಿಸಿದ್ದೇನೆ. ನನ್ನ ಹುಟ್ಟುಹಬ್ಬವನ್ನು(ಮೇ 15) ಆಚರಿಸಬಾರದು ಮತ್ತು ಯಾವುದೇ ಆಚರಣೆಗಳನ್ನು ಮಾಡಬಾರದು ಎಂದು ಶಿವಕುಮಾರ್ ಹೇಳಿದರು.

ಡಿಕೆ ಶಿವಕುಮಾರ್
ರಾಯ್ ಬರೇಲಿ ಜನತೆ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಜ್ಜಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ರಾಜ್ಯದಲ್ಲಿ ಭೀಕರ ಬರಗಾಲದ ಹಿನ್ನೆಲೆಯಲ್ಲಿ ಮೇ 15ರಂದು ತಮ್ಮ ಹುಟ್ಟುಹಬ್ಬ ಆಚರಿಸದಂತೆ ಹಾಗೂ ತಾವು ಚುನಾವಣಾ ಪ್ರಚಾರಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ತಮ್ಮ ನಿವಾಸ, ಕಚೇರಿಗೆ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಬರಬಾರದು ಎಂದು ಡಿಕೆ ಶಿವಕುಮಾರ್ ಈಗಾಗಲೇ ಮನವಿ ಮಾಡಿದ್ದಾರೆ.

ಎಲ್ಲೆಡೆ ಉತ್ತಮ ವಾತಾವರಣವಿದ್ದು, ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ಕೇಂದ್ರದಲ್ಲಿ ನಾವೇ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಏಳು ಹಂತದ ಸಾರ್ವತ್ರಿಕ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ರಾಯ್ ಬರೇಲಿ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.

ಏಪ್ರಿಲ್ 26 ರಂದು ಚುನಾವಣೆ ನಡೆದ ಕೇರಳದ ವಯನಾಡ್ ಕ್ಷೇತ್ರದಿಂದಲೂ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com