ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
Published on

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಮತ್ತು ಆಡಳಿತದ ಮೇಲಿನ ಹಿಡಿತ ಕಳೆದುಕೊಂಡಿದೆ ಎಂದು ಆರೋಪಿಸಿದೆ.

ಹುಬ್ಬಳ್ಳಿಯಲ್ಲಿ ಬುಧವಾರ ನಡೆದ 20 ವರ್ಷದ ಅಂಜಲಿ ಅಂಬಿಗೇರ್ ಹತ್ಯೆಯ ನಂತರ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಸಿ ಎನ್ ಅಶ್ವಥ್ ನಾರಾಯಣ್ ಅವರು ಸಿದ್ದರಾಮಯ್ಯ ನೇತೃತ್ವದ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು. ಅಲ್ಲದೆ ಗದಗದಲ್ಲಿ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಪೊಲೀಸರನ್ನು ಬಳಸುತ್ತಿದ್ದಾರೆ. ಚುನಾವಣೆ ನಂತರ, ಪೊಲೀಸರು ವಿರೋಧ ಪಕ್ಷದ ಕಾರ್ಯಕರ್ತರ ವಿರುದ್ಧ ದೌರ್ಜನ್ಯ ಪ್ರಕರಣಗಳಂತಹ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ದೂರಿದರು.

ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯನ್ನು ಮಲಗಿದ್ದಲ್ಲೇ ಬರ್ಬರವಾಗಿ ಹತ್ಯೆಗೈದ ಯುವಕ!

ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಯಾವುದೇ ಹಿಡಿತ ಇಲ್ಲ. ನೇಹಾ ಹಿರೇಮಠ ಹತ್ಯೆ ಪ್ರಕರಣದ ನಂತರ ಪೊಲೀಸರು ಎಚ್ಚರ ವಹಿಸುತ್ತಾರೆ ಅಥವಾ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಿರ್ದೇಶನ ನೀಡುತ್ತಾರೆ ಎಂದು ನಾವು ಭಾವಿಸಿದ್ದೇವೆ. ಆದರೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಂತೆ ತೋರುತ್ತಿಲ್ಲ. ಹೀಗಾಗಿ ಒಂದರ ಹಿಂದೆ ಒಂದರಂತೆ ಕೊಲೆಗಳು ನಡೆಯುತ್ತಿವೆ’’ ಎಂದು ವಾಗ್ದಾಳಿ ನಡೆಸಿದರು.

ಅಂಜಲಿ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ ಶೆಟ್ಟರ್, ರಾಜ್ಯಾದ್ಯಂತ ಇಂತಹ ಘಟನೆಗಳು ಹೆಚ್ಚುತ್ತಿರುವುದನ್ನು ಗಮನಿಸಿದರೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿರುವುದು ಸ್ಪಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜವಾಬ್ದಾರಿ ಹೊರಬೇಕು ಎಂದರು.

ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿದ್ದು, ಈ ಅವಧಿಯಲ್ಲಿ ಕೊಲೆ, ಸುಲಿಗೆ, ಮತಾಂಧ ಶಕ್ತಿಗಳ ಅಬ್ಬರದ ಘಟನೆಗಳು ನಡೆಯುತ್ತಿವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರು ಆರೋಪಿಸಿದ್ದಾರೆ.

‘ಇದೊಂದು ಅಸಮರ್ಥ ಹಾಗೂ ಅಭಿವೃದ್ಧಿ ಶೂನ್ಯ ಸರ್ಕಾರವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಅದರಲ್ಲೂ ಗೃಹ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’’ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com