
ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಉಂಟಾಗಿದ್ದ ಮೈತ್ರಿ ಅಭ್ಯರ್ಥಿ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಈ ಕ್ಷೇತ್ರದಲ್ಲಿ ಬಿ ಫಾರಂ ಇಲ್ಲದೆಯೇ ಬಿಜೆಪಿ ನಾಯಕ ಇಸಿ ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿ ಗೊಂದಲ ಉಂಟಾಗಿತ್ತು.
ಈ ಬೆನ್ನಲ್ಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ (NDA ಅಭ್ಯರ್ಥಿ) ಕೆ.ವಿವೇಕಾನಂದ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಶುಭಕೋರಿದ್ದಾರೆ. ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ನಾಯಕ ಜಿಟಿ ದೇವೇಗೌಡ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಯದುವೀರ್ ಒಡೆಯರ್, ವಿಪಕ್ಷ ನಾಯಕ ಆರ್ ಅಶೋಕ್ ಉಪಸ್ಥಿತರಿದ್ದರು.
Advertisement