ಶಾಸಕರಿಗೆ ಅನುದಾನ ನೀಡಿಲ್ಲ, ಕಾಂಗ್ರೆಸ್ ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ: ವಿ ಸುನೀಲ್ ಕುಮಾರ್

ಕಳೆದ ಒಂದು ವರ್ಷದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಮತ್ತು ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್ ಒತ್ತಾಯಿಸಿದರು.
ಮಾಜಿ ಸಚಿವ ವಿ ಸುನೀಲ್ ಕುಮಾರ್
ಮಾಜಿ ಸಚಿವ ವಿ ಸುನೀಲ್ ಕುಮಾರ್
Updated on

ಬೆಂಗಳೂರು: ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್, ಕಳೆದ ಒಂದು ವರ್ಷದಲ್ಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಪಡೆದಿಲ್ಲ. ಕಳೆದ ಒಂದು ವರ್ಷದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಮತ್ತು ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಬೇಕು ಎಂದು ಒತ್ತಾಯಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇಡೀ ಸರ್ಕಾರ ಅಸಮರ್ಥ ಮತ್ತು ವಿಫಲವಾಗಿದೆ. ಸಿಎಂ ಮತ್ತು ಅವರ ಸಂಪುಟದ ಸಚಿವರು ದಯನೀಯವಾಗಿ ವಿಫಲರಾಗಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದರೆ, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವಲ್ಲಿ ಕಂದಾಯ ಮತ್ತು ಆರ್‌ಡಿಪಿಆರ್‌ ಸಚಿವರು ವಿಫಲರಾಗಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇದು ಗುರಿಯಿಲ್ಲ ಸರ್ಕಾರವಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ. ಒಂದು ರೂಪಾಯಿ ಅನುದಾನವನ್ನು ಕೂಡ ಬಿಡುಗಡೆ ಮಾಡಿಲ್ಲ. ನಾವು ಶಾಸಕರು ಯಾವುದೇ ಕೆಲಸವನ್ನು ಕೈಗೆತ್ತಿಕೊಂಡಿಲ್ಲ. ಇದನ್ನು ಜನರಿಗೆ ವಿವರಿಸಲು ನಮಗೆ ಸಾಧ್ಯವಾಗುತ್ತಿಲ್ಲ. ವಾಸ್ತವವಾಗಿ ಜನರು ಕಾಂಗ್ರೆಸ್‌ಗೆ ಮತ ಹಾಕಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಅವರು ಹೇಳಿದರು.

ಮಾಜಿ ಸಚಿವ ವಿ ಸುನೀಲ್ ಕುಮಾರ್
ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ

ಸಿಎಂ ಅಸಮರ್ಥರಾಗಿದ್ದು, ಅವರ ಸಂಪುಟದ ಸಚಿವರ ಮೇಲೆ ನಿಯಂತ್ರಣ ಹೊಂದಿಲ್ಲ. ಯಾವುದೇ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ನೌಕರರಿಗೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ. ಇಂಧನ ಸಚಿವ ಕೆಜೆ ಜಾರ್ಜ್‌ ಕೂಡ ವಿಫಲವಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ದಿನಕ್ಕೆ 10-12 ಗಂಟೆಯೂ ವಿದ್ಯುತ್‌ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com