ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ನಾಯಕರು

ಲೋಕಸಭಾ ಚುನಾವಣೆ 2024: ವಿವಿಧ ರಾಜ್ಯಗಳಲ್ಲಿ ರಾಜ್ಯ ನಾಯಕರ ಹವಾ, ಅಬ್ಬರದ ಪ್ರಚಾರದಲ್ಲಿ ಬಿಝಿ!

ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದು, ಈ ಚುನಾವಣೆಯ ಸಿದ್ಧತೆಗಳ ಜೊತೆಗೆ ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಚಾರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಬಿಝಿಯಾಗಿದ್ದಾರೆ.
Published on

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದು, ಈ ಚುನಾವಣೆಯ ಸಿದ್ಧತೆಗಳ ಜೊತೆಗೆ ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಚಾರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಬಿಝಿಯಾಗಿದ್ದಾರೆ.

ಕೆಲವರು ಉತ್ತರ ರಾಜ್ಯಗಳಲ್ಲಿ ಬೀಡು ಬಿಟ್ಟಿದ್ದರೆ, ಇನ್ನೂ ಕೆಲವರು ಇತರೆ ರಾಜ್ಯಗಳಲ್ಲಿ ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ವಿಧಾನಪರಿಷತ್ ಚುನಾವಣ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳ ಹಿಂದೆ ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಇದೀಗ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿದ್ದು, ರಾಹುಲ್ ಗಾಂಧಿ ಪರ ಪ್ರಚಾರ ನಡೆಸುತ್ತಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರೂ ಕೂಡ ಉತ್ತರಪ್ರದೇಶದಲ್ಲಿ ರಾಹುಲ್ ಪರ ಪ್ರಚಾರ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಾರ ಪ್ರವಾಸ ಕೈಗೊಳ್ಳುವ ನಿರೀಕ್ಷೆ ಇದೆ.

ಕಾಂಗ್ರೆಸ್ ನಾಯಕರು
INDIA ಮೈತ್ರಿಕೂಟ 300 ಸ್ಥಾನ ಗೆಲ್ಲಲಿದೆ, ಎನ್‌ಡಿಎ 200 ಸ್ಥಾನಗಳನ್ನು ಮಾತ್ರ ಗಳಿಸಲಿದೆ: ಡಿಕೆ ಶಿವಕುಮಾರ್

ಕೇವಲ ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ಬಿಜೆಪಿಯಿಂದಲೂ ಹಲವಾರು ಸದಸ್ಯರು ವಿವಿಧ ರಾಜ್ಯಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ಮಹಾರಾಷ್ಟ್ರದಲ್ಲಿದ್ದು, ಮುಂಬೈನಲ್ಲಿ ತುಳು ಕನ್ನಡಿಗ ಸಂಘದ ಸಭೆ ನಡೆಸಿದ್ದಾರೆ. ಮುಂಬೈ ನಗರದಲ್ಲಿ ಕರಾವಳಿ ಕರ್ನಾಟಕದ ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ.

ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬಿಹಾರದಲ್ಲಿ ಪ್ರಚಾರ ಮಾಡುತ್ತಿದ್ದರೆ, ಸಿಟಿ ರವಿ ಉತ್ತರ ಪ್ರದೇಶದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಲೋಕಸಭೆಗೆ ಅತಿ ಹೆಚ್ಚು ಸದಸ್ಯರನ್ನು ಕಳುಹಿಸುವ ಮಹಾರಾಜ್ಯದತ್ತ ಗಮನಹರಿಸುವಂತೆ ಸೂಚಿಸಿರುವುದರಿಂದ ಕರ್ನಾಟಕದ ಹಲವು ಹಿರಿಯ ನಾಯಕರು ಉತ್ತರಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿವೆ.

ಇದೇ ವೇಳೆ ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ಮೇಲ್ಮನೆಯಲ್ಲಿ ಹೆಚ್ಚಿನ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿರುವುದರಿಂದ ರಾಜ್ಯದಲ್ಲಿ ಪರಿಷತ್ ಚುನಾವಣೆಯತ್ತ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com