ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಿಕ್ಷಣದ ಬುನಾದಿಯೇ ಅಸ್ಥಿರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶನಿವಾರ ಹೇಳಿದ್ದಾರೆ.
ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ
Updated on

ಬೆಂಗಳೂರು: ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶನಿವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ. ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋಧನವಾಗಿದೆ.

ಬಿ.ವೈ ವಿಜಯೇಂದ್ರ
SSLC ಗ್ರೇಸ್ ಮಾರ್ಕ್​ ರದ್ದತಿಗೆ CM ಸಿದ್ದರಾಮಯ್ಯ ಸೂಚನೆ: ಮುಂದಿನ ವರ್ಷದಿಂದಲೇ ಜಾರಿ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ 'ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು' ಅಂತದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಒದಗಿ ಬಂದಿದೆ. 'ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತದೆ ಎಂದು ಟೀಕಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ವಿವೇಕ ಬಳಸದೆ ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ. ಈಗಲಾದರೂ ಈ ನಾಡನ್ನು ಹಾಗೂ ದೇಶವನ್ನು ಭವಿಷ್ಯತ್ತಿನಲ್ಲಿ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿ ದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com