ದೇವೇಗೌಡ ಜೀವ ಬಲಿ ಪಡೆಯಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ: ಡಿಕೆಶಿ ವಿರುದ್ಧ ಹರಿಹಾಯ್ದ ಜೆಡಿಎಸ್

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ... ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. ಸಿಡಿ ಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದೆ.

ಸಂಗ್ರಹ ಚಿತ್ರ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ-ಶಿವರಾಮೇಗೌಡ ಫೋನ್ ಕರೆ ವೈರಲ್, ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಆಡಿಯೋ!

ಇದೇ ವೇಳೆ ನಿಮ್ಮ ಸಿಡಿ ಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿಕೆ ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

  • ಸಂಚು ನಂ.1: ಪ್ರಧಾನಿಗಳಾದ ನರೇಂದ್ರ ಅವರಿಗೆ ಅಪಖ್ಯಾತಿ ತರುವುದು.

  • ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.

  • ಸಂಚು ನಂ.3: ಜೆಡಿಎಸ್-ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.

  • ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಈ ಸಂಚು ಜಾರಿಗೆ ಸಿಡಿ ಶಿವಕುಮಾರ್ ಸ್ಲೀಪರ್ ಸೆಲ್ ನ ಟೂಲ್ ಕಿಟ್ ವ್ಯವಹಾರ ಈ ಕೆಳಕಂಡಂತಿದೆ..

  • ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ರೂ.100 ಕೋಟಿ!!

  • ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ರೂ.100 ಕೋಟಿ ಆಫರ್!!

  • ಅಡ್ವಾನ್ಸ್ ಆಗಿ ರೂ.5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ.

  • ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ ಸಿಡಿ ಶಿವಕುಮಾರ್.

  • ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ ಸಿಡಿ ಶಿವಕುಮಾರ್.

  • ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com