
ಬೆಳಗಾವಿ: ಉಪ ಮುಖ್ಯಮಂತ್ರಿ ಹುದ್ದೆಗೆ ನಮ್ಮ ಪಕ್ಷದಲ್ಲಿ ಈಗ ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ಸಾರ್ವತ್ರಿಕ ಚುನಾವಣೆಗೂ ಮುನ್ನ ಹೆಚ್ಚಿನ ಡಿಸಿಎಂ ಹುದ್ದೆಗಳ ಬೇಡಿಕೆ ಇತ್ತು, ಆದರೆ ಈಗ ಅಂತಹ ಬೇಡಿಕೆಗಳು ಇಲ್ಲ ಎಂದಿದ್ದಾರೆ.
ನಿನ್ನೆ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಿನ ಸರ್ಕಾರದಲ್ಲಿ ಒಬ್ಬರೇ ಡಿಸಿಎಂ ಇರುತ್ತಾರೆ, ಇನ್ನು ಹೆಚ್ಚಿನ ಡಿಸಿಎಂಗಳ ಪ್ರಸ್ತಾಪ ಈಗ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪದ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಅಧಿಕಾರಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಅಂಕಿಅಂಶಗಳನ್ನು ಒದಗಿಸಿದ್ದಾರೆ, ಒಂದು ವರ್ಷ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಉತ್ತಮ ಆಡಳಿತದ ಬದ್ಧತೆ ಹೊಂದಿರುವುದಾಗಿಯೂ ಭರವಸೆ ಕೊಟ್ಟಿದ್ದಾರೆ ಎಂದರು.
Advertisement