ದೇಶಕ್ಕೆ ವಾಪಸ್ ಬಂದು, ತನಿಖೆ ಎದುರಿಸುವಂತೆ ಪ್ರಜ್ವಲ್‌ಗೆ ಚಿಕ್ಕಪ್ಪ HDK ಮತ್ತೊಮ್ಮೆ ಮನವಿ

ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷ ಮತ್ತು ಮಿತ್ರ ಪಕ್ಷ ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ವಾಪಸ್ ಬಂದು ತನಿಖೆ ಎದುರಿಸಬೇಕು ಎಂದು ಅವರ ಚಿಕ್ಕಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಬುಧವಾರ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷ ಮತ್ತು ಮಿತ್ರ ಪಕ್ಷ ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಪೆನ್ ಡ್ರೈವ್‌ ಪ್ರಕರಣಕ್ಕೂ ಬಿಜೆಪಿ-ಜೆಡಿಎಸ್ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಫ್ಯಾಮಿಲಿ ಗೆ ಸ್ವಲ್ಪ ಡ್ಯಾಮೆಜ್ ಆಗಿರೋದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಗ್ರಹಚಾರ ನಮಗೆ'? ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು.

ಎಚ್‌ಡಿ ಕುಮಾರಸ್ವಾಮಿ
ನಮ್ಮ ಕುಟುಂಬದವರ ಮೊಬೈಲ್ ಫೋನ್ ಕದ್ದಾಲಿಕೆ; ಪ್ರಜ್ವಲ್ ರೇವಣ್ಣ SIT ಮುಂದೆ ಶರಣಾಗಲಿ: ಎಚ್.ಡಿ ಕುಮಾರಸ್ವಾಮಿ

ಪ್ರಜ್ವಲ್ ವಿದೇಶಕ್ಕೆ ಹೋಗುವುದು ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ. ಪ್ರಜ್ವಲ್ ಗೆ ಹೇಳುತ್ತಿದ್ದೀನಿ, ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕ ಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ ಎಂದು ಕುಮಾರಸ್ವಾಮಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com