ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಛಾಟನೆ ಮಾಡಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Updated on

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೂ ಕಾಂಗ್ರೆಸ್ ಟಿಕೆಟ್ ಕೈತಪ್ಪಿರುವುದರಿಂದ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಇಂದು ಆದೇಶ ಹೊರಡಿಸಿದ್ದಾರೆ.

ಡಿಕೆ ಶಿವಕುಮಾರ್
ವಿಧಾನ ಪರಿಷತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳು ಕಣಕ್ಕೆ; ಕುತೂಹಲಕಾರಿ ತ್ರಿಕೋನ ಸ್ಪರ್ಧೆ!

ಕಾಂಗ್ರೆಸ್ ನಿಂದ ಉಚ್ಚಾಟಿನೆಗೊಂಡವರು

ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಎಸ್.ಪಿ.ದಿನೇಶ್

ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ- ಫರ್ಡಿನಾಂಡ್ ಲಾರೆನ್ಸ್

ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಅಭ್ಯರ್ಥಿ -ಬಿ.ಆರ್‌.ನಂಜೇಶ್‌

ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ಶಿವರಾಜ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com