ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ- ಜೆಡಿಎಸ್ ಸಮನ್ವಯ ಸಭೆ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ!

ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ -ಬಿಜೆಪಿ ಪಕ್ಷಗಳ ಸಮನ್ವಯ ಸಭೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.
ಕುಮಾರಸ್ವಾಮಿ, ಆರ್. ಅಶೋಕ್ ಮತ್ತಿತರರು
ಕುಮಾರಸ್ವಾಮಿ, ಆರ್. ಅಶೋಕ್ ಮತ್ತಿತರರು
Updated on

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ -ಬಿಜೆಪಿ ಪಕ್ಷಗಳ ಸಮನ್ವಯ ಸಭೆ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.

ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖ ನಾಯಕರು ಭಾಗಿಯಾಗಿದ್ದ ಈ ಸಭೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿಕೊಳ್ಳಲು ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸುತ್ತಿದೆ. ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ- ಜೆಡಿಎಸ್ ಮೈತ್ರಿ ಅ. ದೇವೇಗೌಡರು ಜನತಾದಳಲ್ಲೇ ಬೆಳದವರು, 1996 ರಲ್ಲಿ ನನ್ನ ಚುನಾವಣೆಗೂ ಅ ದೇವೇಗೌಡರು ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಅವರು ಏನಾದರೂ ಆಮಿಷ ತೋರಿಸಿಲಿ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಒಂದಾಗಿ ಅ. ದೇವೇಗೌಡರನ್ನು ಗೆಲ್ಲಿಸಬೇಕು ಎಂದು ಉಭಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಕುಮಾರಸ್ವಾಮಿ, ಆರ್. ಅಶೋಕ್ ಮತ್ತಿತರರು
ಅತ್ಯಾಚಾರಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋ ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಕುಮಾರಸ್ವಾಮಿ ಪ್ರಶ್ನೆ

ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಬಿಟ್ಟು ಬೇರೆಯವರು ನಮ್ಮ ಹೆಸರು ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ನಾನು ಮತ್ತು ದೇವೇಗೌಡರು ತಮ್ಮನ್ನು ಆಶೀರ್ವದಿಸಿದ್ದಾರೆ ಎಂದು ಹೇಳಿಕೊಂಡು ಚೆನ್ನಪಟ್ಟಣದಲ್ಲಿ ಪುಟ್ಟಸ್ವಾಮಿ ತಿರುಗುತ್ತಿದ್ದಾರೆ. ಈ ರೀತಿ ನಾನಾಗಲಿ, ದೇವೇಗೌಡರಾಗಲಿ ಯಾರಿಗೂ ಬೆಂಬಲ ನೀಡಿರುವುದಿಲ್ಲ. ಅವರು ತಕ್ಷಣ ನಮ್ಮ ಹೆಸರು, ಭಾವಚಿತ್ರಗಳನ್ನು ಬಳಸುವುದನ್ನು ನಿಲ್ಲಿಸಬೇಕು. ತಪ್ಪಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸರ್ಕಾರಕ್ಕೆ ಅಕ್ಕಿ ಕೊಡುವ ಯೋಗ್ಯತೆ ಇಲ್ಲ. 5 ಕೆಜಿ ಅಕ್ಕಿಯ ಬದಲಿಗೆ ನೀಡಲಾಗುತ್ತಿದ್ದ 170 ರೂಪಾಯಿಯನ್ನು ಮೂರು ತಿಂಗಳಿಂದ ಕೊಟ್ಟಿಲ್ಲ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಟ್ಟಿಲ್ಲ. ಬಿತ್ತನೆ ಬೀಜದ ಬೆಲೆಯನ್ನು ಶೇ. 70ಕ್ಕೆ ಏರಿಕೆ ಮಾಡಿದ್ದಾರೆ, ಗೊಬ್ಬರ ಸಿಕ್ತಿಲ್ಲ ಇವತ್ತು. ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ ಎಂದು ಆರೋಪಿಸಿದರು.

ಎರಡು ಮೂರು ಮಳೆಗೆ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಇವರು ಯಾವ ಬ್ರ್ಯಾಂಡ್ ಬೆಂಗಳೂರು ಮಾಡಿರೋದು. ಅದು ಬ್ರ್ಯಾಂಡ್ ಬೆಂಗಳೂರು ಅಲ್ಲ, ಲೂಟಿ ಬೆಂಗಳೂರು. ಬಿಡಿಎನಲ್ಲಿ ಮೊನ್ನೆ ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ. ಬೆಂಗಳೂರಿಗೆ ಇವರ ಕೊಡುಗೆ ಏನು? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com