ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್! ಸಿಎಂ, ಡಿಸಿಎಂ, ಸಚಿವರ ಭೇಟಿಗೆ ಸದಾವಕಾಶ!

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಮೀಸಲಿಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಷಯವನ್ನು ತಿಳಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಮೀಸಲಿಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಷಯವನ್ನು ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಕೆಪಿಸಿಸಿ ಕಚೇರಿಯಲ್ಲಿ ಭೇಟಿಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್
ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್

ಪಕ್ಷದ ಇಬ್ಬರು ಅಥವಾ ಮೂವರು ಪದಾಧಿಕಾರಿಗಳಿಗೆ ಈ ಜವಾಬ್ದಾರಿ ವಹಿಸಲಾಗುವುದು. ಪಕ್ಷದ ಕಾರ್ಯಕರ್ತರು ಒಂದು ವಾರ ಮುಂಚಿತವಾಗಿ ತಮ್ಮ ಸದಸ್ಯತ್ವ ಪ್ರಮಾಣಪತ್ರವನ್ನು ನೀಡಿ ಯಾವ ಸಚಿವರನ್ನು ಭೇಟಿಯಾಗಬೇಕೆಂದು ಲಿಖಿತ, SMS ಅಥವಾ ಇಮೇಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದು ರಾಜ್ಯಮಟ್ಟದಿಂದ ಬ್ಲಾಕ್‌ಮಟ್ಟದವರೆಗಿನ ಕಾರ್ಯಕರ್ತರಿಗೆ ಮಾತ್ರ ನೀಡಿರುವ ಅವಕಾಶವಾಗಿದೆ. ಮಾಜಿ ಸಚಿವರಿಗೆ, ಶಾಸಕರಿಗೆ ಈ ಭೇಟಿಯ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com