17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು, ಪ್ರಜ್ವಲ್ ರೇವಣ್ಣಗೆ ಸೋಲು ಸಾಧ್ಯತೆ: ಬಿಜೆಪಿ ಮೌಲ್ಯಮಾಪನ

ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶಬಾಬು ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ ಡಾ. ಸಿಎನ್ ಮಂಜುನಾಥ್ ಗೆಲುವು ಸಾಧಿಸುವ ನಿರೀಕ್ಷೆಯಿದೆ.
17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು, ಪ್ರಜ್ವಲ್ ರೇವಣ್ಣಗೆ ಸೋಲು ಸಾಧ್ಯತೆ: ಬಿಜೆಪಿ ಮೌಲ್ಯಮಾಪನ
Updated on

ಬೆಂಗಳೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಇನ್ನೇನು ಒಂದು ವಾರ ಬಾಕಿ ಉಳಿದಿರುವಾಗಲೇ ಬಿಜೆಪಿ ಆಂತರಿಕ ಮೌಲ್ಯಮಾಪನವು ಖುಷಿಯನ್ನು ನೀಡಿದೆ. ರಾಜ್ಯದ 28 ಸ್ಥಾನಗಳ ಪೈಕಿ 17 ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿರೀಕ್ಷೆಯಿದೆ.

ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಮುಖಂಡರಿಂದ ಬಂದ ಮಾಹಿತಿಯನ್ನಾಧರಿಸಿ ಎಷ್ಟು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಹುದು ಎಂಬುದನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿರುವ ಲೈಂಗಿಕ ಕಿರುಕುಳ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಗೆಲ್ಲುವ ಭರವಸೆ ಇಲ್ಲ ಎಂಬುದು ಕುತೂಹಲ ಮೂಡಿಸಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶಬಾಬು ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ ಡಾ. ಸಿಎನ್ ಮಂಜುನಾಥ್ ಗೆಲುವು ಸಾಧಿಸುವ ನಿರೀಕ್ಷೆಯಿದೆ.

17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು, ಪ್ರಜ್ವಲ್ ರೇವಣ್ಣಗೆ ಸೋಲು ಸಾಧ್ಯತೆ: ಬಿಜೆಪಿ ಮೌಲ್ಯಮಾಪನ
ಜೂನ್ 4 ಲೋಕಸಭೆ ಚುನಾವಣೆ ಫಲಿತಾಂಶ: ಕರ್ನಾಟಕ ಬಿಜೆಪಿಯಲ್ಲಿ ಪ್ರಮುಖ ಬದಲಾವಣೆ ನಿರೀಕ್ಷೆ!

ಏಪ್ರಿಲ್ 26ರಂದು ಎರಡನೇ ಹಂತದಲ್ಲಿ ಮತದಾನ ನಡೆದ ದಕ್ಷಿಣ ಕರ್ನಾಟಕ ಭಾಗದ 14 ಸ್ಥಾನಗಳ ಪೈಕಿ ಬಿಜೆಪಿ 11 ಸ್ಥಾನಗಳನ್ನು ಪಡೆಯಬಹುದು ಎನ್ನಲಾಗಿದೆ. ಮೇ 7ರಂದು ಮೂರನೇ ಹಂತದಲ್ಲಿ ಮತದಾನ ನಡೆದ ಉತ್ತರ ಕರ್ನಾಟಕದ 14 ಸ್ಥಾನಗಳಲ್ಲಿ ಆರು ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ದೊರಕುವ ಸಾಧ್ಯತೆಯಿದೆ.

ಕಲ್ಯಾಣ-ಕರ್ನಾಟಕ ವಲಯದಲ್ಲಿ ಪಕ್ಷಕ್ಕೆ ಕೊಂಚ ಹಿನ್ನಡೆಯಾಗಿದ್ದು, ಈ ಭಾಗದಲ್ಲಿನ ಪಕ್ಷದ ಕಳಪೆ ಪ್ರದರ್ಶನವು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವ ಐದು ಖಾತರಿಗಳ ಕಾರಣದಿಂದಾಗಿರಬಹುದು ಎಂದು ಊಹಿಸಲಾಗಿದೆ. ಬೆಂಗಳೂರಿನ ನಾಲ್ಕು ಸ್ಥಾನಗಳು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ. ವಿಶೇಷವಾಗಿ ಒಕ್ಕಲಿಗ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.

17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು, ಪ್ರಜ್ವಲ್ ರೇವಣ್ಣಗೆ ಸೋಲು ಸಾಧ್ಯತೆ: ಬಿಜೆಪಿ ಮೌಲ್ಯಮಾಪನ
ಅಡ್ಡಿಯಾಗದ ಪ್ರಜ್ವಲ್ ರೇವಣ್ಣ ಪ್ರಕರಣ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿ!

ಮಲೆನಾಡು-ಕರಾವಳಿ ಕರ್ನಾಟಕ ಮತ್ತು ಮುಂಬೈ-ಕರ್ನಾಟಕ ಪ್ರದೇಶಗಳಲ್ಲಿ ಪಕ್ಷವು ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ ಎಂದು ಬಿಜೆಪಿ ಮೌಲ್ಯಮಾಪನ ಹೇಳುತ್ತದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25, ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಒಂದು ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯೊಬ್ಬರು ಆಯ್ಕೆಯಾಗಿದ್ದರು.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com