ಕಾಂಗ್ರೆಸ್ 'ಬೆಂಗಳೂರು ವಿರೋಧಿ'; ನಗರದ ಅಭಿವೃದ್ಧಿ ನಿರ್ಲಕ್ಷ್ಯ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

'ಕಾಂಗ್ರೆಸ್ ಬೆಂಗಳೂರು ವಿರೋಧಿ' ಎಂದು ಕರೆಯುವ ಮೂಲಕ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಡಾ.ಸಿ.ಎನ್.ಅಶ್ವತ್ಥ ನಾರಾಯಣ
Updated on

ಬೆಂಗಳೂರು: 'ಕಾಂಗ್ರೆಸ್ ಬೆಂಗಳೂರು ವಿರೋಧಿ' ಎಂದು ಕರೆಯುವ ಮೂಲಕ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಕಾಂಗ್ರೆಸ್ ಪಕ್ಷ ಬೆಂಗಳೂರು ನಗರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಗುಂಡಿಗಳಿಂದ ತುಂಬಿದ್ದು, ಕಸವನ್ನು ಸ್ವಚ್ಛಗೊಳಿಸುತ್ತಿಲ್ಲ. ಎಲ್ಲೆಂದರಲ್ಲಿ ತ್ಯಾಜ್ಯ ಕಂಡುಬರುತ್ತದೆ. ಫುಟ್‌ಪಾತ್ ಅತಿಕ್ರಮಣದಿಂದ ತತ್ತರಿಸಿದ್ದು, ಬೀದಿ ದೀಪಗಳಿಲ್ಲ, ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ಮೂಲ ಸೌಲಭ್ಯಗಳನ್ನು ಪೂರೈಸುತ್ತಿಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ವಿದ್ಯುತ್, ನೀರು, ಬಸ್ಸಿನ ಶುಲ್ಕ, ಆಸ್ತಿ ತೆರಿಗೆ, ನೋಂದಣಿ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ಜನರ ರಕ್ತ ಹೀರುತ್ತಿದ್ದಾರೆ, ಆಡಳಿತ ಅಥವಾ ಅಭಿವೃದ್ಧಿ ಎರಡೂ ಇಲ್ಲ, ಕಾಂಗ್ರೆಸ್ ಬೆಂಗಳೂರನ್ನು ದ್ವೇಷಿಸುತ್ತಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಬೆಂಗಳೂರನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಬೆಂಗಳೂರು: ರಸ್ತೆ ಗುಂಡಿ ಮುಚ್ಚಲು BBMP ಕಾರ್ಯಪಡೆ; ಪ್ರತಿ ವಲಯದ ಟ್ರ್ಯಾಫಿಕ್ ACP ಒಳಗೊಂಡಂತೆ ಸಮಿತಿ ರಚನೆ!

ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ. ಬೆಂಗಳೂರನ್ನು ಬಾಂಬ್ ಸ್ಫೋಟ ಮತ್ತು ಡ್ರಗ್ ಮಾಫಿಯಾ ನಗರವನ್ನಾಗಿ ಮಾಡಲಾಗುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com