KMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಪಿ (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
Updated on

ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಪಿ. (52) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡೆತ್ ನೋಟ್‌ನಲ್ಲಿ ಹೆಸರು ನಮೂದಿಸಿರುವ ಸಚಿವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರನ್ ಅವರು 187 ಕೋಟಿ ರೂಪಾಯಿ ಹಗರಣವನ್ನು ಬಹಿರಂಗಪಡಿಸಿದ್ದು, ತಮ್ಮ ಡೆತ್ ನೋಟ್‌ನಲ್ಲಿ ಮಂತ್ರಿಗಳು ಮತ್ತು ಅಧಿಕಾರಿಗಳ ಹೆಸರನ್ನು ನಮೂದಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಡೆಯುತ್ತಿರುವ ಲೂಟಿಗೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
KMVSTDC ಅಧಿಕಾರಿ ಆತ್ಮಹತ್ಯೆ: ಮೂವರು ಉನ್ನತ ಅಧಿಕಾರಿಗಳ ವಿರುದ್ಧ FIR; ಆರೋಪಿಗಳು ನಾಪತ್ತೆ!

ಸರಕಾರ ನೀಡಿರುವ ಭ್ರಷ್ಟಾಚಾರದ ಗ್ಯಾರಂಟಿ ಅಧಿಕಾರಿಗಳ ಆತ್ಮಹತ್ಯೆಗೆ ಕಾರಣವಾಗುತ್ತಿದೆ. ಈ ಪ್ರಕರಣದಿಂದಾಗಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಬೇರೆ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಪ್ರಭಾವಿಗಳು ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಹಗರಣಕ್ಕೆ ಸಚಿವ ಬಿ.ನಾಗೇಂದ್ರ ಅವರೇ ಹೊಣೆಯಾಗಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜತೆಗೆ ಪಾಲಿಕೆಯ ಅವ್ಯವಹಾರಗಳ ಮಾಹಿತಿಯೊಂದಿಗೆ ಡೆತ್ ನೋಟ್ ನಲ್ಲಿ ನಮೂದಿಸಿರುವ ಸಚಿವರು ಹಾಗೂ ಅಧಿಕಾರಿಗಳ ಹೆಸರು ಸಿದ್ದರಾಮಯ್ಯ ಸರ್ಕಾರದ ಸ್ಥಿತಿಗತಿಗೆ ಹಿಡಿದ ಕನ್ನಡಿಯಾಗಿದೆ ಎಂದರು.

ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನರ ಮೇಲೆ ಸಾಲದ ಹೊರೆ ಹೊರಿಸಲಾಗಿದೆ. ಸರಕಾರಿ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಆಡಳಿತ ಯಂತ್ರ ಕುಸಿದಿದೆ. ಇದಕ್ಕೆ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಮಹಿಳೆಯರ ಮೇಲಿನ ದೌರ್ಜನ್ಯಗಳೇ ಸಾಕ್ಷಿ ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com