ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಧಾನಿ ಮೋದಿಯ ಮುಖ್ಯ ಅಜೆಂಡಾ: ಬಿಎಲ್ ಸಂತೋಷ್

ಮೂರನೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಅಜೆಂಡಾ 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವುದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್ ಸಂತೋಷ್ ಹೇಳಿದ್ದಾರೆ.
ಬಿಎಲ್ ಸಂತೋಷ್
ಬಿಎಲ್ ಸಂತೋಷ್TNIE
Updated on

ಉಡುಪಿ: ಮೂರನೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಅಜೆಂಡಾ 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವುದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್ ಸಂತೋಷ್ ಹೇಳಿದ್ದಾರೆ.

ನೈರುತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯ ಅಂಗವಾಗಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಉತ್ತಮ ಆಡಳಿತಕ್ಕಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಕಲ್ಪನೆಯನ್ನು ಪ್ರಚಾರ ಮಾಡುವಂತೆ ಸಂತೋಷ್ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು. ಇದಲ್ಲದೆ, ಎಂಎಲ್‌ಸಿ ಚುನಾವಣೆಯ ಸಮಯದಲ್ಲಿ ಮತದಾರರನ್ನು ಅವರ ಮನೆ ಬಾಗಿಲಿಗೆ ಭೇಟಿ ನೀಡಿ ಪ್ರಚಾರ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು.

ಕರ್ನಾಟಕದ ರಾಜ್ಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂತೋಷ್, ನೀತಿ ಕರಡು ಸಮಿತಿಯಲ್ಲಿ ಎಡಪಂಥೀಯ ಮತ್ತು ಹಿಂದೂ ವಿರೋಧಿ ಸದಸ್ಯರೇ ಸೇರಿದ್ದು ಸರ್ಕಾರವು ದೇಶ ವಿರೋಧಿ ನೀತಿಯನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ದುರಹಂಕಾರ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಅಧಿಕಾರಕ್ಕಾಗಿ ಶೀತಲ ಸಮರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕನಸುಗಳು ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ನುಚ್ಚುನೂರಾಗಲಿವೆ ಎಂದರು.

ಬಿಎಲ್ ಸಂತೋಷ್
ಮತ್ತೆ ಅಧಿಕಾರಕ್ಕೆ ಬರುತ್ತೇನೆ, ಮೊದಲ 125 ದಿನಗಳ ಮಾರ್ಗಸೂಚಿ ಸಿದ್ಧ: ಚುನಾವಣಾ ಪ್ರಚಾರಕ್ಕೆ ತೆರೆ ಎಳೆದ ಮೋದಿ

ಮುಂಬರುವ ಎಮ್‌ಎಲ್‌ಸಿ ಚುನಾವಣೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುರಿತು ಮಾತನಾಡಿದ ಅವರು, ಅಧಿಕಾರಕ್ಕೆ ಅಂಟಿಕೊಂಡಿರುವುದನ್ನು ಭಟ್ ಸಾಬೀತುಪಡಿಸಿದ್ದಾರೆ. ಅವರಿಗೆ ಯಾವಾಗಲೂ ಪಕ್ಷದ ಟಿಕೆಟ್ ಬೇಕು. ಮೂರ್ನಾಲ್ಕು ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದವರು ಅನೇಕರಿದ್ದಾರೆ. ಆದರೆ ಅವರು ಇನ್ನೂ ಟಿಕೆಟ್ ನಿರೀಕ್ಷಿಸಲಿಲ್ಲ. ಪಕ್ಷದ ಅಧಿಕೃತ ಅಭ್ಯರ್ಥಿಯ ಯಶಸ್ಸಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ಅದಕ್ಕಾಗಿ ತಳಮಟ್ಟದ ಕಾರ್ಯಕರ್ತರು ಪ್ರತಿ ಮತದಾರರನ್ನು ಅವರ ಮನೆ ಬಾಗಿಲಿಗೆ ತಲುಪಬೇಕು ಎಂದು ಹೇಳಿದರು.

ನಾಯಕರ ಜನಪ್ರಿಯತೆಗಿಂತ ಸಾರ್ವಜನಿಕ ಹಿತಾಸಕ್ತಿಯನ್ನು ಪಕ್ಷವು ಮುಖ್ಯವಾಗಿ ಪರಿಗಣಿಸುತ್ತದೆ ಎಂದು ಬಿಎಲ್ ಸಂತೋಷ್ ಹೇಳಿದರು. ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್, ಶಾಸಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com