ಅಹಂಕಾರದ ಮಾತುಗಳನ್ನಾಡಿ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂಬುದು ಭ್ರಮೆ: ಆರ್.ಅಶೋಕ್

ಬಿಎಂಟಿಸಿಯ ಇ.ವಿ ವಾಹನಗಳಲ್ಲಿ ಕೇರಳದವರಿಗೆ ಉದ್ಯೋಗ ನೀಡಲಾಗಿದೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅಶೋಕ್ ನಡುವೆ ಟ್ವೀಟ್ ವಾರ್ ಮುಂದುವರಿದಿದೆ.
R Ashok
ಆರ್ ಅಶೋಕ್online desk
Updated on

ಬೆಂಗಳೂರು: ಬಿಎಂಟಿಸಿಯ ಇ.ವಿ ವಾಹನಗಳಲ್ಲಿ ಕೇರಳದವರಿಗೆ ಉದ್ಯೋಗ ನೀಡಲಾಗಿದೆ ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅಶೋಕ್ ನಡುವೆ ಟ್ವೀಟ್ ವಾರ್ ಮುಂದುವರಿದಿದೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ನಿಮ್ಮ ಟ್ವೀಟ್ ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಸಿಎಂ ಕುರ್ಚಿಯಲ್ಲಿ ಕೂತಿದ್ದೇನೆ ಎಂದು ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ ಎಂದು ಆರ್ .ಅಶೋಕ್ ತಿರುಗೇಟು ನೀಡಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅಶೋಕ್, ನಿಮ್ಮ ರೀತಿಯ ಅಹಂಕಾರದ ಮಾತುಗಳು ನನಗೆ ಬರುವುದಿಲ್ಲ, ಅದು ನನಗೆ ಬೇಡವೂ ಬೇಡ. ಆದರೆ ಜೂನ್ 4ರಂದು ಯಾರು ಯಾರಿಗೆ ದೊಣ್ಣೆ ಕೊಟ್ಟು ಹೊಡಿಸಿಕೊಳ್ಳುತ್ತಾರೆ, ಜೂನ್ 4 ರ ನಂತರ ಬಡಿಗೆಯಿಂದ ಹೊಡೆದು ಯಾರು ಯಾರನ್ನ ಕುರ್ಚಿಯಿಂದ ಕೆಳಗಿಳಿಸುತ್ತಾರೆ ನೋಡೋಣ ಎಂದಿದ್ದಾರೆ.

ತಾವು ಅಪರೂಪಕ್ಕೆ ತಮ್ಮ ಗಾಢ ನಿದ್ದೆಯಿಂದ ಎದ್ದು ನನ್ನ ಒಂದು ಟೀಕೆಗೆ ಉತ್ತರ ನೀಡುವ ಶ್ರಮ ತೆಗೆದುಕೊಂಡಿದ್ದೀರಿ. ಮೊದಲು ಅದಕ್ಕೆ ಅಭಿನಂದನೆಗಳು. ಆದರೆ ಅದರಲ್ಲೂ ಮೈಯೆಲ್ಲಾ ಎಣ್ಣೆ ಸವರಿಕೊಂಡಿರುವಂತೆ ತಮ್ಮ ಕರ್ತವ್ಯದಿಂದ ಜಾರಿಕೊಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೋರಿಸುತ್ತೀರಲ್ಲ ತಮ್ಮ ಭಂಡತನಕ್ಕೆ ಏನು ಹೇಳಬೇಕು ಎಂದಿದ್ದಾರೆ.

R Ashok
'ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ?; ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿ ಕರುಣಿಸಲಿ'

ಪತ್ರಿಕೆಗಳಲ್ಲಿ ಹತ್ತಾರು ಕೋಟಿ ಖರ್ಚು ಮಾಡಿ ಪುಟಗಟ್ಟಲೆ ಜಾಹೀರಾತು ಕೊಡುವಾಗ ಅದು ನಿಮ್ಮ ಯೋಜನೆ. ಹಸಿರು ಬಾವುಟ ತೋರಿಸಿ ಬಸ್ಸಿಗೆ ಚಾಲನೆ ನೀಡುವಾಗ ಅದು ತಮ್ಮ ಸರ್ಕಾರದ ಕೊಡುಗೆ. ಆದರೆ ಅದರಲ್ಲಿ ನ್ಯೂನತೆಗಳು ಕಂಡು ಬದರೆ ಅದು ಕೇಂದ್ರ ಸರ್ಕಾರದ ಹೊಣೆ. ಇದು ಯಾವ ಸೀಮೆ ಆಡಳಿತ ಸ್ವಾಮಿ? ತಮಗೆ ಕರ್ನಾಟಕದ ಜನತೆ ಅಧಿಕಾರ ಕೊಟ್ಟಿರುವುದು ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳಲಿ ಅಂತ ಅಲ್ಲ.

ನಿಮಗೆ ನಿಜವಾಗಿಯೂ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವ ಬದ್ಧತೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿಕೊಡಬಹುದಿತ್ತಲ್ಲ? ಎಲ್ಲದಕ್ಕೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ತಾವು, ಎಲ್ಲದಕ್ಕೂ ಕೇಂದ್ರ ಮಂತ್ರಿಗಳಿಗೆ ಮನವಿ ಪತ್ರ ಕೊಡುವ ತಾವು ಇದಕ್ಕೆ ಮಾತ್ರ ಯಾಕೆ ಮಾಡಲಿಲ್ಲ. ಅಸಲಿಗೆ ನಾನು ಈ ವಿಷಯ ಪ್ರಸ್ತಾಪ ಮಾಡುವವರೆಗೂ ನಿಮಗೆ ಈ ವಿಷಯ ಗೊತ್ತೇ ಇರಲಿಲ್ಲ. ಇದು ನಿಮ್ಮ ಆಡಳಿತ ವೈಖರಿ. ನಾಲ್ಕು ಅಹಂಕಾರದ ಮಾತುಗಳು ಆಡಿದ ಮಾತ್ರಕ್ಕೆ ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ತಿಳಿದಿದ್ದರೆ ಅದು ತಮ್ಮ ಭ್ರಮೆ. ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್! ಎಂದು ಟಾಂಗ್ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com