ಮೈಸೂರು: ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮತಯಾಚನೆ ವೇಳೆ ಕಣ್ಣೀರು ಹಾಕಿದ್ದನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಕಟುಕರಿಗೆ ಕಣ್ಣೀರು ಬರುವುದಿಲ್ಲ' ಎಂದು ಹೇಳಿದರು. ರಾಜಕಾರಣದಲ್ಲಿ ಕೆಲವರು ಕಟುಕರಿದ್ದಾರೆ. ಅವರಿಗೆ ಕಣ್ಣೀರು ಬರುವುದಿಲ್ಲ. ಭಯ-ಭಕ್ತಿ ಇಲ್ಲದ ಅವರಿಗೆ ಕಣ್ಣೀರು ಬಾರದು. ನಮಗೆ ಜನರ ಕಷ್ಟ ನೋಡಿದರೆ ಕಣ್ಣೀರು ಬರುತ್ತದೆ ಎಂದರು.
ನಾನೂ ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಅದನ್ನು ಮಾಡಿರುವುದು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ, ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ ಎಂದರು. ಪ್ರಧಾನಿ ಮೋದಿ ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು.
Advertisement