ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಜನರು ಸಿಪಿ ಯೋಗೇಶ್ವರ್'ರನ್ನು ತಿರಸ್ಕರಿಸುತ್ತಾರೆ: HDK

ಪುತ್ರ ನಿಖಿಲ್ ಕುಮಾರಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಿ ಕುಮಾರಸ್ವಾಮಿಯವರು ಟೆಂಪಲ್ ರನ್ ಆರಂಭಿಸಿದ್ದಾರೆ. ಕುಮಾರಸ್ವಾಮಿ ಅವರು ಭಾನುವಾರ ಚಾಮುಂಡಿ ಬೆಟ್ಟ, ಉತ್ತನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆಎಸ್‌ಎಸ್ ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.
HD kumaraswamy  in chamundeshwari temple
ಚಾಮುಂಡೇಶ್ವರಿ ದೇವಾಲಯದಲ್ಲಿ ಎಚ್.ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
Updated on

ಮೈಸೂರು: ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಕಾವು ಜೋರಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರಸ್ವಾಮಿ ಜಯಭೇರಿಗಾಗಿ ಭಾರೀ ಕಸರತ್ತು ನಡೆಸುತ್ತಿದ್ದಾರೆ.

ಪುತ್ರ ನಿಖಿಲ್ ಕುಮಾರಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಿ ಕುಮಾರಸ್ವಾಮಿಯವರು ಟೆಂಪಲ್ ರನ್ ಆರಂಭಿಸಿದ್ದಾರೆ. ಕುಮಾರಸ್ವಾಮಿ ಭಾನುವಾರ ಚಾಮುಂಡಿ ಬೆಟ್ಟ, ಉತ್ತನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆಎಸ್‌ಎಸ್ ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಚುನಾವಣೆಯಲ್ಲಿ ಈ ಹಿಂದೆ ಎರಡು ಬಾರಿ ಸೋಲಿನ ರುಚಿ ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು, ಈ ಬಾರಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿರುವ ಹಿರಿಯ ನಾಯಕ ಸಿಪಿ ಯೋಗೇಶ್ವರ್ ವಿರುದ್ಧ ಪೈಪೋಟಿಗಿಳಿದಿದ್ದಾರೆ.

ಉಪಚುನಾವಣೆ ಫಲಿತಾಂಶ ಮುಖ್ಯಮಂತ್ರಿ ಕುರ್ಚಿಗೆ ಅಪಾಯ ಎದುರು ಮಾಡುವುದಿಲ್ಲ. ಆದರೆ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿರುವ ಜನರು ಅವರ ವಿರುದ್ಧ ಮತ ಹಾಕಲಿದ್ದಾರೆಂದು ಜೆಡಿಎಸ್ ಹೇಳಿದೆ.

ಪಕ್ಷದ ಹಿತದೃಷ್ಟಿಯಿಂದ ನಿಖಿಲ್ ಸ್ಪರ್ಧಿಸಲು ಬಯಸಿದ್ದಾರೆ. ಹೀಗಾಗಿ ನಿಖಿಲ್ ಗೆಲುವಿಗಾಗಿ ಪೀಠಾಧಿಪತಿಗಳು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಎಂದು ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಕುಮಾರಸ್ವಾಮಿ ಅವರು ಹೇಳಿದರು.

ಇದೇ ವೇಳೆ ತಮ್ಮ ಭಾವನಾತ್ಮಕ ಭಾಷಣವನ್ನು ಟೀಕಿಸಿದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನರ ಕಷ್ಟವನ್ನು ಕಂಡು ಕಣ್ಣೀರು ಬಂದಿತು. ಚುನಾವಣೆ ಸಂದರ್ಭದಲ್ಲಿ ಅನುಕಂಪ ಗಿಟ್ಟಿಸಿಕೊಳ್ಳಲು ನಾನು ಅಳಲಿಲ್ಲ, ಅನುಕಂಪ ಇಲ್ಲದ ಕೆಲ ಕಟುಕರು ಅಳುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

HD kumaraswamy  in chamundeshwari temple
ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ

5 ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ ಕುರಿತ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರು ಈ ಬಗ್ಗೆ ಮಾತನಾಡಿದ್ದು ಮುಂದಿನ ಮೂರು ವರ್ಷಗಳವರೆಗೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಆದರೆ, ಸರ್ಕಾರ ದಿವಾಳಿಯಾಗುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ ಎಂದರು.

ರಾಜ್ಯವನ್ನು ದಿವಾಳಿಯಾಗಲು ಜನರು ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ಅಭಿವೃದ್ಧಿ ಕಾರ್ಯಗಳು ಮತ್ತು ಗ್ಯಾರಂಟಿ ಯೋಜನೆಗಳೆರಡನ್ನೂ ಕೇಂದ್ರೀಕರಿಸಬಲ್ಲ ವಿಷಯಗಳ ಕುರಿತು ಕಾಂಗ್ರೆಸ್ ಪಕ್ಷಕ್ಕೆ ಆಸಕ್ತಿ ಇಲ್ಲ ಎಂದು ಹೇಳಿದರು.

ಮುಡಾ ಮತ್ತು ವಕ್ಫ್ ವಿವಾದ ಎರಡನ್ನೂ ಮುಚ್ಚಿಹಾಕಲು ಕಾಂಗ್ರೆಸ್ ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡುತ್ತಿದೆ ಆದರೆ, ಈ ವಿವಾದಗಳು ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ಹಣ ಮತ್ತು ಅಧಿಕಾರ ಬಲ ಹೊಂದಿದ್ದರೂ, ಅವುಗಳ ಪ್ರಯೋಗ ಮಾಡಿದರು ಈ ಬಾರಿಯ ಮೂರೂ ಉಪಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಪ್ರಚಾರದಿಂದ ದೂರ ಉಳಿದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ದೇವೇಗೌಡರು ತಮ್ಮ ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದು, ಉಪಚುನಾವಣೆಗೆ ಸಮಯ ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಆದರೆ, ಜಿ ಟಿ ದೇವೇಗೌಡರು ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಶ್ರಮಿಸುತ್ತಾರೆ ಎಂಬ ಭರವಸೆ ನನಗಿದೆ ಎಂದರು.

ಇದೇ ವೇಳೆ ಪ್ರಧಾನಿ ಮೋದಿ ಅವರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಹೆಸರು ಕೇಳಿ ಬಂದ ನಂತರ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಇದೀಗ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com