ಮೈಸೂರು: ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯಲು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಷಯವಾಗಿ ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ನೊಟೀಸ್ ವಾಪಸ್ ತೆಗೆದುಕೊಳ್ಳಿ ಎಂದು ಸೂಚಿಸಿದರೆ ಸಮಸ್ಯೆ ಬಗೆಹರಿಯುತ್ತಾ? ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಉದ್ದೇಶಶುದ್ದಿ ಇದ್ದರೆ, ನೊಟೀಸ್ ವಾಪಸ್ ತೆಗೆದುಕೊಳ್ಳಿ ಎಂದು ಸೂಚನೆ ನೀಡುವ ಬದಲು ಗೆಝೆಟ್ ನೋಟಿಫಿಕೇಶನ್ ನ್ನು ವಾಪಸ್ ಪಡೆಯಲಿ ಎಂದು ಸವಾಲು ಹಾಕಿದ್ದು, ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ವಕ್ಫ್ ಗೆ ಏಕೆ ಅನ್ವಯ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.
ರೈತರೆಡೆಗೆ ಸಿಎಂ ಗೆ ನಿಜವಾದ ಕಾಳಜಿ ಇದ್ದರೆ, ಗೆಝೆಟ್ ನೋಟಿಫಿಕೇಶನ್ ನ್ನು ವಾಪಸ್ ಪಡೆಯಲಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ವಕ್ಫ್ ವಿಚಾರದಲ್ಲಿ ವಿಪಕ್ಷಗಳು ಶಾಂತಿ ಕದಡುವ ಕೆಲಸ ಮಾಡುತ್ತಿವೆ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಗಲಭೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಪ್ರಕರಣಗಳನ್ನು ವಾಪಸ್ ಪಡೆಯಲು ಬಿಜೆಪಿ ಹೇಳಿತ್ತಾ? ನೊಟೀಸ್ ಕೊಡುವುದಕ್ಕೆ ನಾವು ಹೇಳಿದ್ದೆವಾ?
ಮುಸ್ಲಿಂ ಸಮುದಾಯವನ್ನು ಓಲೈಸಲು ಮುಂದಾಗಿರುವ ಸಿದ್ದರಾಮಯ್ಯ ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ, ಉಳಿದ ಎಲ್ಲಾ ದೃಷ್ಟಿಯಿಂದಲೂ ಸಿಎಂ ಸಂಪೂರ್ಣವಾಗಿ ಮುಸ್ಲಿಂ ಆಗಿದ್ದಾರೆ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಒಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಮತ್ತೆ ಏನನ್ನು ನಿರೀಕ್ಷಿಸಲು ಸಾಧ್ಯ. ಸಂವಿಧಾನದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡಿ ರಾಜಕೀಯದಲ್ಲಿ ಇರಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ವಕ್ಫ್ ಆಸ್ತಿ ವಿವಾದ ನಿನ್ನೆ ಮೊನ್ನೆಯದಲ್ಲ ಬಿಜೆಪಿಅವಧಿಯಲ್ಲೂ ನೋಟಿಸ್ ನೀಡಲಾಗಿದೆ. ನಮ್ಮ ಅವಧಿಯಲ್ಲೂ ನೊಟಿಸ್ ನೀಡಲಾಗಿದೆ. ನೋಟಿಸ್ ವಾಪಸ್ ಗೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದರು.
Advertisement