ನಿಖಿಲ್ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ನಿಖಿಲ್ ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ವಕ್ಫ್ ವಿವಾದ ಪ್ರಸ್ತಾಪ; ಭೂ ದಾಖಲೆಗಳ ಪರಿಶೀಲಿಸಿಕೊಳ್ಳುವಂತೆ ರೈತರಿಗೆ BJP ಮನವಿ

ಚುನಾವಣಾ ಪ್ರಚಾರದ ವೇಳೆ ವಕ್ಫ್ ವಿವಾದ ಪ್ರಸ್ತಾಪಿಸಿರುವ ಬಿಜೆಪಿ ನಾಯಕರು, ರೈತರು ಭೂದಾಖಲೆಗಳನ್ನು ಒಮ್ಮೆ ಪರಿಶೀಲಿಸುವಂತೆ ಮನವಿ ಮಾಡಿದೆ.
Published on

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಕಾವು ಜೋರಾಗಿದ್ದು, ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

ಚುನಾವಣಾ ಪ್ರಚಾರದ ವೇಳೆ ವಕ್ಫ್ ವಿವಾದ ಪ್ರಸ್ತಾಪಿಸಿರುವ ಬಿಜೆಪಿ ನಾಯಕರು, ರೈತರು ಭೂದಾಖಲೆಗಳನ್ನು ಒಮ್ಮೆ ಪರಿಶೀಲಿಸುವಂತೆ ಮನವಿ ಮಾಡಿದೆ.

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿದಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಭಾನವಾರ ಚಕ್ಕರೆ ಗ್ರಾಮದಲ್ಲಿ ಪ್ರಚಾರ ನಡೆಸಿದರು. ವಕ್ಫ್ ಮಂಡಳಿ ಎಲ್ಲೆಂದರಲ್ಲಿ ಭೂಮಿ ಕಸಿಯುವ ಪ್ರಯತ್ನಗಳನ್ನು ಮಾಡಿದ್ದು, ರೈತರು ಕೂಡಲೇ ತಾಲೂಕು ಕಚೇರಿಗಳಿಗೆ ಭೇಟಿ ನೀಡಿ, ತಮ್ಮ ಭೂಮಿ ದಾಖಲೆಗಳನ್ನು ಪರಿಶೀಲಿಸಬೇಕೆಂದು ಮನವಿ ಮಾಡಿಕೊಂಡರು.

ಚನ್ನಪಟ್ಟಣ ತಾಲೂಕಿನ ಯಲಿಯೂರು ಬಳಿಯ ಹಿಂದೂಗಳ ರುದ್ರಭೂಮಿಯ ಮೇಲೂ ವಕ್ಫ್ ಕಣ್ಣು ಬಿದ್ದಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿದ್ದರೂ ರೈತರ ಭೂಮಿಗಳ ನಕಲಿ ದಾಖಲೆಗಳ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಭಾರತೀಯ ಸೇನೆಗಿಂತಲೂ ವಕ್ಫ್ ಮಂಡಳಿ ಹೆಚ್ಚಿನ ಭೂಮಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ನಿಖಿಲ್ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ

ಇದೇ ವೇಳೆ ತಮ್ಮನ್ನು ತಾವು ಭಗೀರಥ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಅಂದಿನ ಸಿಎಂ ಡಿವಿ ಸದಾನಂದಗೌಡ ಅವರು 17 ಕೆರೆಗಳಿಗೆ ನೀರು ತುಂಬಿಸಲು ಹಣ ಮಂಜೂರು ಮಾಡಿದ್ದರು. ನಂತರ ಸಿಎಂ ಆದ ಬಸವರಾಜ ಬೊಮ್ಮಾಯಿ ಅವರು ಹಣ ಬಿಡುಗಡೆಗೆ ಆದೇಶ ನೀಡಿದ್ದರು ನೀರಾವರಿ ಎಂಜಿನಿಯರ್ ವೆಂಕಟೇಗೌಡ ಅವರು ಯೋಜನೆಗೆ ಚಾಲನೆ ನೀಡಿದ್ದರು. ವೆಂಕಟೇಗೌಡರು ನಮ್ಮ ಮೇಲೆ ಹಲವು ಬಾರಿ ಒತ್ತಡ ಹೇರಿ ಈ ಯೋಜನೆ ಜಾರಿಯಾಗುವಂತೆ ಮಾಡಿದ್ದರು ಎಂದರು.

ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಮಾತನಾಡಿ, ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಹದಿನೆಂಟು ಬಾರಿ ಚನ್ನಪಟ್ಟಣಕ್ಕೆ ಬರುತ್ತಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗದೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು ಏಕೆ? ಎಂದು ಪ್ರಶ್ನಿಸಿದರು.

X

Advertisement

X
Kannada Prabha
www.kannadaprabha.com