ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲಾನ್ ಮಾಡಿದ್ದರು: ಸಿಎಂ ಸಿದ್ದರಾಮಯ್ಯ

ಬೊಮ್ಮಾಯಿ ಅವರನ್ನು ಈಗ ಎಲ್ಲರೂ ಶಕುನಿ ಎಂದು ಕರೆಯುತ್ತಿದ್ದಾರೆ, ಒಳಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತಹವರು ರಾಜಕಾರಣದಲ್ಲಿ ಇರಬಾರದು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭಅಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಸಿಕ್ಕಿದೆ.
ಸಿಎಂ ಬಸವರಾಜ ಬೊಮ್ಮಾಯಿ-ಸಿದ್ದರಾಮಯ್ಯ
ಸಿಎಂ ಬಸವರಾಜ ಬೊಮ್ಮಾಯಿ-ಸಿದ್ದರಾಮಯ್ಯ
Updated on

ಹುಬ್ಬಳ್ಳಿ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಹೀಗಾಗಿ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವ್ಯಂಗ್ಯಾಡಿದರು.‌

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹಮದ್ ಖಾನ್ ಪಠಾಣ್ ಪರ ಪ್ರಚಾರ ನಡೆಸಿದ ಸಿಎಂ, ಬೊಮ್ಮಾಯಿ ಅವರನ್ನು ಈಗ ಎಲ್ಲರೂ ಶಕುನಿ ಎಂದು ಕರೆಯುತ್ತಿದ್ದಾರೆ, ಒಳಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತಹವರು ರಾಜಕಾರಣದಲ್ಲಿ ಇರಬಾರದು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭಅಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಸಿಕ್ಕಿದೆ. ಯಾಸೀರ್ ಅವರನ್ನು ಈ ಸಲ ಗೆಲ್ಲಿಸಬೇಕೆಂದು ಹೇಳಿದರು.

ಇಲ್ಲಿನ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ-ಸಿದ್ದರಾಮಯ್ಯ
ಶಿಗ್ಗಾಂವಿ ಉಪಚುನಾವಣೆ: ಜಮೀರ್ ಸಂಧಾನ ಯಶಸ್ವಿ; ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್

ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ವಿರುದ್ಧ ಹರಿಹಾಯ್ದ ಅವರು, ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆದರೆ, ಇಲ್ಲಿ ಮಾಜಿ ಸಿಎಂಗಳ ಮೊಮ್ಮಗ, ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣವಲ್ಲವೇ ಎಂದು ಪ್ರಶ್ನಿಸಿದರು.

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ಮಾತನಾಡಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅಥವಾ ಬಿಜೆಪಿಯವರ ಷಡ್ಯಂತ್ರಗಳಿಗೆ ನಾನು ಎಂದಿಗೂ ಮಣಿಯುವುದಿಲ್ಲ. ಹಣ ಬೇಕಿದ್ದರೆ ಎಷ್ಟು ಬೇಕಾದರೂ ಮಾಡಬಹುದಿತ್ತು. ಆದರೆ, ಯಾವುದೇ ತಪ್ಪಿಲ್ಲದ ಕಾರಣ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ನಾನು ಬಗ್ಗುತ್ತೇನೆಯೇ ಹೊರತು ಇವರ ಕುತಂತ್ರಕ್ಕಲ್ಲ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನ ತೇಜೋವಧೆ ಮಾಡುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com