ಬೆಂಗಳೂರು: ರಾಜ್ಯ ಸರ್ಕಾರ ಎಫ್‌ಐಆರ್ ದಾಖಲಿಸುವ ಮೂಲಕ ರೈತರ ಪರ ಧ್ವನಿಯನ್ನು ಅಡಗಿಸಲು ಬಯಸುತ್ತಿದೆ ಎಂದು ಬಿಜೆಪಿ ಶನಿವಾರ ಹೇಳಿದೆ.
ರಾಜ್ಯದ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸುವ ಗುರಿ ಹೊಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ರೈತರ ಪರ ಧ್ವನಿ ಎತ್ತುವವರನ್ನು ಗುರಿಯಾಗಿಸಿ ಸುಳ್ಳು ದೂರು ದಾಖಲಿಸಿ ಬೆದರಿಕೆ ಹಾಕುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಶನಿವಾರ ಆರೋಪಿಸಿದರು.
ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ವಿರುದ್ಧ ಎಫ್ ಐಆರ್ ದಾಖಲಿಸುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ರೈತರನ್ನು ಭಯ ಪಡಿಸುವ ಕ್ರಮವಾಗಿದೆ. ಈ ಘಟನೆಯನ್ನು ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡಲು ಬಳಸಿಕೊಂಡಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ ಬಿಜೆಪಿ ಯಾವುದೇ ಸಂದರ್ಭದಲ್ಲೂ ಸುಳ್ಳು ದೂರುಗಳು ಮತ್ತು ಬೆದರಿಕೆ ತಂತ್ರಗಳಿಗೆ ಬಗ್ಗುವುದಿಲ್ಲ, ಈಗಾಗಲೇ ಸಾಲದ ಹೊರೆಗೆ ಸಿಲುಕಿರುವ ನಮ್ಮ ರೈತರ ಜೀವನಾಧಾರವಾಗಿರುವ ಭೂಮಿಯನ್ನು ವಕ್ಫ್ ಅಧಿಕಾರಿಗಳಿಗೆ ಬಿಟ್ಟುಕೊಡಲು ಒತ್ತಾಯಿಸಿದರೆ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದರು.
ವಕ್ಪ್ ವಿವಾದ ಹಿನ್ನೆಲೆಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಧ್ಯಮವೊಂದರ ಸುಳ್ಳು ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕರ್ನಾಟಕ ಸರ್ಕಾರ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
Advertisement