ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟೀಸ್ ಗಳನ್ನು ವಾಪಸ್ಸು ತೆಗೆದುಕೊಂಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ, ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ 2 ದಿನಗಳ ಹಿಂದೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ವಕ್ಫ್ ಬೋರ್ಡ್ ನೀಡಿದ ನೋಟೀಸ್ ಗಳ ಪ್ರಗತಿ ಕುರಿತು ವರದಿಯನ್ನು ಕೇಳಿದ್ದಾರೆ. ದ್ವಿಮುಖ ನೀತಿ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ಭೂ ಕಬಳಿಸುವುದರ ನೇತೃತ್ವನ್ನು ವಸತಿ ಸಚಿವ ಜಮೀರ್ ಅವರಿಗೆ ವಹಿಸಲಾಗಿದೆ. ಸಿದ್ದರಾಮಯ್ಯ ಅವರು ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ, ಮುಖ್ಯ ಕಾರ್ಯದರ್ಶಿಯವರು ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳಿದ್ದಾರೆಂದು ಹೇಳಿದರು.
ಟಿಪ್ಪು ಸುಲ್ತಾನ್ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಕಾಂಗ್ರೆಸ್ ಸರ್ಕಾರ ವಕ್ಫ್ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ. ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನೂ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿಲಾಗಿದೆ. 15 ದಿನಗಳಲ್ಲಿ ಎಲ್ಲಾ ಆಸ್ತಿಗಳನ್ನು ವಕ್ಫ್ ಮಡಳಿಗೆ ಬರೆಯಿಸಿ ಎಂಬುದಾಗಿ ಸಿದ್ದರಾಮಯ್ಯ ಹೇಳಇದ್ದಾರೆ. ಮಾಜಿ ಸಿಎಂ ಬೊಮ್ಮಾಯಿ ಕಬಳಕಿಗೆ ಮಾಡಿ ಭೂಮಿ ವಾಪಸ್ ಪಡೆಯಿರಿ ಎಂದಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ, ವಕ್ಫ್ ಮಂಡಳಿಯ ಸದಸ್ಯರ ವಿಧಾನಸೌಧ ನಮ್ಮದು ಎಂದೂ ಕೂಡ ಹೇಳುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀರಂಗಪಟ್ಟಣದಲ್ಲಿ 400 ವರ್ಷಗಳಷ್ಟು ಹಳೆಯದಾದ ದೇವಾಲಯ ಮತ್ತು ಶಾಲೆಯನ್ನು ವಕ್ಫ್ ಬೋರ್ಡ್ ಆಸ್ತಿಯನ್ನಾಗಿ ಪರಿವರ್ತಿಸಲಾಗಿದೆ. ಇದು ರಾಜ್ಯದ ಜನರಲ್ಲಿ ಆತಂಕವನ್ನು ಉಂಟುಮಾಡಿದೆ ಎಂದು ಹೇಳಿದರು.
Advertisement