ಕಾಂಗ್ರೆಸ್ ಸರ್ಕಾರ ಅಧಿಕಾರ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿಯೇ ಇಲ್ಲ: ಎಚ್‌ಡಿ ದೇವೇಗೌಡ

ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ ಈಗಾಗಲೇ ನೆಲಕಚ್ಚಿದೆ. ಇತರೆ ಗ್ಯಾರಂಟಿಗಳೂ ಹೆಚ್ಚು ಕಾಲ ಉಳಿಯುವುದಿಲ್ಲ. ಈ ಸರ್ಕಾರವೂ ಪೂರ್ಣಾವಧಿ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿ ಇಲ್ಲ.
ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ
ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ
Updated on

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾಪ ಪೂರ್ಣಗೊಳಿಸುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶನಿವಾರ ಹೇಳಿದರು.

ತಮ್ಮ ಮೊಮ್ಮಗ ಮತ್ತು ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ ಐದನೇ ದಿನ ಪ್ರಚಾರದಲ್ಲಿ ಪಾಲ್ಗೊಂಡ ದೇವೇಗೌಡ ಅವರು ಹಲವಾರು ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದರು.

ಐದು ಗ್ಯಾರಂಟಿಗಳ ಪೈಕಿ ಒಂದು ಗ್ಯಾರಂಟಿ ಈಗಾಗಲೇ ನೆಲಕಚ್ಚಿದೆ. ಇತರೆ ಗ್ಯಾರಂಟಿಗಳೂ ಹೆಚ್ಚು ಕಾಲ ಉಳಿಯುವುದಿಲ್ಲ. ಈ ಸರ್ಕಾರವೂ ಪೂರ್ಣಾವಧಿ ಪೂರ್ಣಗೊಳಿಸುತ್ತದೆ ಎಂಬ ಗ್ಯಾರಂಟಿ ಇಲ್ಲ ಎಂದು ಹೇಳಿದರು.

ಬಳಿಕ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್‌ನಲ್ಲಿ ನನ್ನ ಮುಂದೆ ನಿಲ್ಲುವ ನೈತಿಕತೆ ಯಾವ ರಾಜಕಾರಣಿಗೂ ಇಲ್ಲ ಎಂದು ಹೇಳಿದರು.

ನಂತರ INDIA ಬ್ಲಾಕ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಅವರ ಮೈತ್ರಿಯಲ್ಲಿ ಪ್ರಧಾನಿಯಾಗಬಲ್ಲ ನಾಯಕರಿದ್ದಾರೆಯೇ? ಸ್ಟಾಲಿನ್ ಅಥವಾ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬಹುದೇ? ಎಂದು ಪ್ರಶ್ನಿಸಿದರು.

ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ
ಕನಕಪುರ ಶಾಲೆಗಳಿಗೆ 25 ಎಕರೆ ದಾನ ಮಾಡಿದ್ದೇನೆ, ದೇವೇಗೌಡ ಕುಟುಂಬ ಏನು ನೀಡಿದೆ?: JDS ಗೆ DKS ಸವಾಲು

ಇದೇ ವೇಳೆ ಮೇಕೆದಾಟು ಯೋಜನೆಯನ್ನು ಸಾಕಾರಗೊಳಿಸಲು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹೋರಾಟ ನಡೆಸುವುದಾಗಿ ಮತದಾರರಿಗೆ ಭರವಸೆ ನೀಡಿದರು.

ಕಾಡುಗೊಲ್ಲರು ಮತ್ತು ಬೆಸ್ತ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಮತದಾರರಿಗೆ ಭರವಸೆ ನೀಡಿದರು.

ನವೆಂಬರ್ 13 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ನಿಖಿಲ್ ಅವರನ್ನು ಬೆಂಬಲಿಸುವ ಮೂಲಕ ಚನ್ನಪಟ್ಟಣದ ಮತದಾರರು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಬಲಪಡಿಸಬೇಕು ಎಂದು ಇದೇ ವೇಳೆ ಮನವಿ ಮಾಡಿದರು..

ಬಳಿಕ ಮಾತನಾಡಿದ ಮಾಜಿ ಡಿಸಿಎಂ ಮತ್ತು ಬಿಜೆಪಿ ನಾಯಕ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು, ಕರ್ನಾಟಕದ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳಿಗೆ ಗೌಡರ ಕೊಡುಗೆಗಳನ್ನು ಶ್ಲಾಘಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com