ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ತಮ್ಮ ಮೊಮ್ಮಗ ಹಾಗೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಚನ್ನಪಟ್ಟಣದ ಟಿಪ್ಪು ನಗರದ ಪೀರ್ ಸಾಬ್ ಗಲ್ಲಿಯಲ್ಲಿರುವ ಅಖಿಲ್ ಶಾ ಖಾದ್ರಿ ದರ್ಗಾದ ಧಾರ್ಮಿಕ ಮುಖಂಡ ಸೈಯದ್ ಮಸನ್ ಶಾ ಖಾದ್ರಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದರು.
ಈ ವೇಳೆ ಉಪಚುನಾವಣೆಯಲ್ಲಿ ನಿಖಿಲ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ವಿಧಾನಸಭೆಗೆ ಆಯ್ಕೆ ಮಾಡಿದರೆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು. ಮುಂಬರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಖಾತರಿ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ದೇವೇಗೌಡರು ತಿಳಿಸಿದರು.
“ಈ ಸರ್ಕಾರ ದಿವಾಳಿಯಾಗಿದೆ. ಚುನಾವಣೆಯ ನಂತರ, ಅವರು ಮತ್ತೆ ಹಣವನ್ನು ಠೇವಣಿ ಇಡುವುದನ್ನು ನಿಲ್ಲಿಸುತ್ತಾರೆ. ಐದು ಖಾತರಿಗಳಲ್ಲಿ ಒಂದನ್ನು ಈಗಾಗಲೇ ಹಿಂಪಡೆಯಲಾಗಿದೆ. ಬೆಂಗಳೂರಿನಲ್ಲಿ ಗುಂಡಿ ತುಂಬಲು ಅವರ ಬಳಿ ಹಣವಿಲ್ಲ ಜನರು ಆಕ್ರೋಶಗೊಂಡಿದ್ದಾರೆ’ ಎಂದು ಗೌಡರು, ಕಾಂಗ್ರೆಸ್ ಸರ್ಕಾರ ಖಜಾನೆ ಖಾಲಿ ಮಾಡಿದೆ. ರಾಜ್ಯಾದ್ಯಂತ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಹಣ ಜಮಾ ಆಗುತ್ತಿಲ್ಲ. ಚನ್ನಪಟ್ಟಣದಲ್ಲಿ ಮಾತ್ರ ಹಣ ಜಮಾ ಮಾಡಲಾಗಿದೆ... ಉಪಚುನಾವಣೆಯ ಮೇಲೆ ಕಣ್ಣಿಟ್ಟು ಈ ರೀತಿ ಮಾಡಲಾಗಿದೆ ಎಂದರು. ಇದೇ ವೇಳೆ ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಕೂಡ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರಿಗೆ ಬೆಂಬಲ ಸೂಚಿಸಲು ಸಮುದಾಯದವರನ್ನು ಭೇಟಿ ಮಾಡಿದ್ದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಸುಮಾರು 25,000 ಮುಸ್ಲಿಂ ಮತದಾರರನ್ನು ಹೊಂದಿದೆ.
Advertisement