ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಜಮೀರ್ ಜನಾಂಗೀಯ ನಿಂದನೆ ಆರೋಪ; ಜೆಡಿಎಸ್ ಆಕ್ರೋಶ

ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಡಿಕೆ ಸುರೇಶ್, ರಹೀಮ್ ಖಾನ್ ಅವರ ಬಣ್ಣ ಯಾವುದು ? ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ?
Kumaraswamy, HDK
ಕುಮಾರಸ್ವಾಮಿ, ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು 'ಕರಿಯ' ಎಂದು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಕರೆದಿರುವುದನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ.

ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಚುನಾವಣೆ ಪ್ರಚಾರದ ವೇಳೆಯಲ್ಲಿ ಜಮೀರ್ ಜನಾಂಗೀಯ ನಿಂದನೆ ಮಾಡಿದ್ದಾರೆ. ಉರ್ದುವಿನಲ್ಲಿ ಕಾಲ ಕುಮಾರಸ್ವಾಮಿ ಎಂದು ಕರೆದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದೆ.

ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್​ ಅಹ್ಮದ್​ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ ಅಪರಾಧವಾಗಿದೆ ಎಂದು ಖಂಡಿಸಿದೆ.

ಈ ಕೂಡಲೇ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್, ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ. ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್‌ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದೆ.

Kumaraswamy, HDK
ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿಗೆ 'ಕಾಲಿಯಾ' ಎಂದ ಜಮೀರ್!

ಮತ್ತೊಂದು ಫೋಸ್ಟ್ ನಲ್ಲಿ ನಿನ್ನನ್ನು ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ನಿನ್ನ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ. ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ. ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಡಿಕೆ ಸುರೇಶ್, ರಹೀಮ್ ಖಾನ್ ಅವರ ಬಣ್ಣ ಯಾವುದು ? ಎಂದು ಪ್ರಶ್ನಿಸಿದ್ದು, ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ? ಇಷ್ಟೊಂದು ಕೀಳು ಮನಸ್ಥಿತಿಯ ವ್ಯಕ್ತಿ ಜಮೀರ್ ಅಹ್ಮದ್ ಖಾನ್ ಅವರನ್ನು ಕಾಂಗ್ರೆಸ್ ಹಾಗೂ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com