'ಕಾಲಾ' ಕುಮಾರಸ್ವಾಮಿ ಹೇಳಿಕೆ: ಚನ್ನಪಟ್ಟಣದಲ್ಲಿ ಕಾಂಗ್ರೆಸ್'ಗೆ ಸೋಲಾದರೆ ಜಮೀರ್ ವಿರುದ್ಧ ಶಿಸ್ತು ಕ್ರಮ?

ಜಮೀರ್ ಹೇಳಿಕೆಯನ್ನ ಒಪ್ಪುವುದಿಲ್ಲ, ಅದನ್ನು ನಾನು ಖಂಡಿಸುತ್ತೇನೆ. ಜಮೀರ್ ಅವರು ಏನುಬೇಕಾದರೂ ಕರೆದುಕೊಳ್ಳಲಿ, ಕರಿಯ ಎಂದಾದರೂ ಅನ್ನಲಿ, ಕೊಚ್ಚೆ ಎಂದಾದರೂ ಕರೆಯಲಿ… ಆದರೆ...
ಸಚಿವ ಜಮೀರ್ ಅಹ್ಮದ್ ಖಾನ್
ಸಚಿವ ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡಿದ್ದೇ ಆದರೆ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸುಳಿವನ್ನು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಜಮೀರ್ ಹೇಳಿಕೆಯನ್ನ ಒಪ್ಪುವುದಿಲ್ಲ, ಅದನ್ನು ನಾನು ಖಂಡಿಸುತ್ತೇನೆ. ಜಮೀರ್ ಅವರು ಏನುಬೇಕಾದರೂ ಕರೆದುಕೊಳ್ಳಲಿ, ಕರಿಯ ಎಂದಾದರೂ ಅನ್ನಲಿ, ಕೊಚ್ಚೆ ಎಂದಾದರೂ ಕರೆಯಲಿ… ಆದರೆ ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ, ಆನ್ ರೆಕಾರ್ಡ್ ಹೇಳುತ್ತಿದ್ದೇನೆ. ಜಮೀರ್ ಹೇಳಿದ್ದು ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಡಿಕೆ.ಶಿವಕುಮಾರ್ ಅವರ ಈ ಹೇಳಿಗೆ ಜಮೀರ್ ಅವರಿಗೆ ಎಚ್ಚರಿಕೆ ನೀಡಿದಂತಿತ್ತು. ಇದೇ ವೇಳೆ ಕ್ರಮ ಕೈಗೊಳ್ಳುತ್ತೀರಾ ಎಂಬ ಪ್ರಶ್ನೆಗೆ ನೋಡೋಣ ಎಂದು ಉತ್ತರಿಸಿದರು.

ಇನ್ನು ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರು ಜಮೀರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಜಮೀರ್ ಅಹ್ಮದ್ ಖಾನ್ ಹಾಗೂ ಕುಮಾರಸ್ವಾಮಿ ಆತ್ಮಿಯ ಸ್ನೇಹಿತರು, ಅವರ ಹೇಳಿಕೆ‌ ಹೊಸದೇನು ‌ಅಲ್ಲ. ನಾನು ಕಪ್ಪಗಿದ್ದೇನೆ ಕರಿಯ ಎಂದರೆ ಏನು ಮಾಡಬೇಕು. ಬಿಳಿಯ ಎಂದರೆ ಆಗುತ್ತಾ? ನಮ್ಮನ್ನೂ ನಿಕ್‌ನೇಮ್ ಗಳಲ್ಲಿ ಕರೆಯುತ್ತಾರೆ. ನಿಮ್ಮನ್ನೂ ಕರೆಯೋದಿಲ್ವೇ? ಹಾಗೆ ಜಮೀರ್ ಕರಿಯ ಎಂದು ಕರೆದಿದ್ದಾರೆ ತಪ್ಪೇನಿದೆ..? ಜಮೀರ್ ಕುಟುಂಬ ಖರೀದಿಸ್ತೇನೆ ಅಂದಿಲ್ಲ. ಹಣದ ಹೊಳೆ ಕುಮಾರಸ್ವಾಮಿ ಹರಿಸಿದ್ದಾರೆ. ಅದಕ್ಕೆ‌ ಬಲಿಯಾಗಬೇಡಿ ಎಂದು ಹೇಳಿದ್ದಾರೆಂದು ಸಮರ್ಥಿಸಿಕೊಂಡಿದ್ದರು.

ಈ ನಡುವೆ ಜಮೀರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಉಪಾಧ್ಯಕ್ಷ ಎಆರ್ ಎಂ ಹುಸೇನ್ ಅವರು ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ,

ಚನ್ನಪಟ್ಟಣ ಉಪಚುನಾವಣೆ ವೇಳೆ ಜಮೀರ್ ನೀಡಿದ ಹೇಳಿಕೆ ಪಕ್ಷಕ್ಕೆ ಕಂಟಕ ತಂದಿಗೆ. ಪಕ್ಷದ ಹಿನ್ನಡೆಗೆ ಜಮೀರ್ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಬಿಜೆಪಿ ಮಾಜಿ ಎಂಎಲ್‌ಸಿ ಹಾಗೂ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೀಶ್ವರ್ ಅವರು, ಜಮೀರ್ ಹೇಳಿಕೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದರು.

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ಎಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕಣಕ್ಕಿಳಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com