ಕುಮಾರಸ್ವಾಮಿ 'ಕರಿಯಾ' ಹೇಳಿಕೆ: ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾದ ಕಾಂಗ್ರೆಸ್

ಪಕ್ಷಕ್ಕೆ ಹಾನಿ ಮಾಡಿದ ಮತ್ತು ಮುಜುಗರ ಉಂಟು ಮಾಡಿದ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್
ಎಚ್.ಡಿ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್
Updated on

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಟೀಕಿಸಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯ ಕಾಂಗ್ರೆಸ್ ಶಿಸ್ತು ಕ್ರಮ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದ್ದಾರೆ.

ಹಲವು ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷಕ್ಕೆ ಹಾನಿ ಮಾಡಿದ ಮತ್ತು ಮುಜುಗರ ಉಂಟು ಮಾಡಿದ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಕ್ಷವನ್ನು ಒತ್ತಾಯಿಸುತ್ತಿದ್ದಾರೆ.

"ನಮ್ಮ ರಾಜ್ಯ ಕಾಂಗ್ರೆಸ್ ಅಧ್ಯಕ್ಷ(ಡಿ ಕೆ ಶಿವಕುಮಾರ್)ರು, ಉಪಚುನಾವಣೆಯ ನಂತರ, ಅವರ (ಖಾನ್) ಹೇಳಿಕೆ ಚುನಾವಣೆಯ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಪಕ್ಷದಲ್ಲಿ ರಹಮಾನ್ ಖಾನ್ ನೇತೃತ್ವದಲ್ಲಿ ಶಿಸ್ತು ಸಮಿತಿಯಿದೆ. ಪಕ್ಷದ ಅಧ್ಯಕ್ಷರು ಈ ಕುರಿತು ಕ್ರಮಕ್ಕೆ ಶಿಸ್ತು ಸಮಿತಿಗೆ ಸೂಚಿಸಿದರೆ, ಅವರು ಖಾನ್ ಅವರನ್ನು ಕರೆದು ವಿಚಾರಿಸಬಹುದು” ಎಂದು ಪರಮೇಶ್ವರ ಅವರು ಹೇಳಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್
'ಕಾಲಾ' ಕುಮಾರಸ್ವಾಮಿ ಹೇಳಿಕೆ: ಚನ್ನಪಟ್ಟಣದಲ್ಲಿ ಕಾಂಗ್ರೆಸ್'ಗೆ ಸೋಲಾದರೆ ಜಮೀರ್ ವಿರುದ್ಧ ಶಿಸ್ತು ಕ್ರಮ?

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯ ಗಂಭೀರವಾಗಿದ್ದರೆ ಸಮಿತಿಯು ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬಹುದು.

ನವೆಂಬರ್ 13 ರಂದು, ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯು ಪಕ್ಷದ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅನೇಕ ಕಾಂಗ್ರೆಸ್ ಮುಖಂಡರು ನಂಬಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com