ಅಗತ್ಯಬಿದ್ದರೆ BJP ಆಮಿಷಗಳ ಬಗ್ಗೆ ತನಿಖೆಗೆ ಆದೇಶ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ತನಿಖೆ ಎಂಬುದು ಮಕ್ಕಳ ಆಟವಲ್ಲ, ಆಮಿಷ ವಿಚಾರ ಕುರಿತು ಅಗತ್ಯಬಿದ್ದರೆ ತನಿಖೆಗೆ ಆದೇಶಿಸಲು ಸರ್ಕಾರ ಸಿದ್ಧವಿದೆ, ಅಂತಹ ಸಂದರ್ಭ ಬಂದರೆ ತನಿಖೆಗೆ ಆದೇಶಿಸುತ್ತೇವೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್
ಗೃಹ ಸಚಿವ ಡಾ.ಜಿ.ಪರಮೇಶ್ವರ್
Updated on

ಮೈಸೂರು: ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಆಡಳಿತ ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳ ನಡುವಲ್ಲೇ ಅಗತ್ಯವಿದ್ದರೆ ತನಿಖೆಗೆ ಆದೇಶಿಸುತ್ತೇವೆಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಪಕ್ಷಗಳ ಆಗ್ರಹ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ತನಿಖೆ ಎಂಬುದು ಮಕ್ಕಳ ಆಟವಲ್ಲ, ಆಮಿಷ ವಿಚಾರ ಕುರಿತು ಅಗತ್ಯಬಿದ್ದರೆ ತನಿಖೆಗೆ ಆದೇಶಿಸಲು ಸರ್ಕಾರ ಸಿದ್ಧವಿದೆ, ಅಂತಹ ಸಂದರ್ಭ ಬಂದರೆ ತನಿಖೆಗೆ ಆದೇಶಿಸುತ್ತೇವೆಂದು ಹೇಳಿದರು.

ಇದೇ ವೇಳೆ 50 ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ತಲಾ 50 ಕೋಟಿ ರೂ.ಗಳ ಆಫರ್ ಬಂದಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಗೃಹ ಸಚಿವರು, ಇಂತಹ ಪ್ರಯತ್ನಗಳು ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ತಿಳಿಸಿದರು.

ಎಷ್ಟು ಹಣ ಆಫರ್ ಮಾಡಿದ್ದಾರೆ ಎಂದು ನಿಖರವಾಗಿ ಹೇಳಲು ಸಾಧ್ಯವಾಗದಿದ್ದರೂ 50 ಕೋಟಿ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎಂದು ಸಿಎಂ ಪ್ರಸ್ತಾಪಿಸಿದ್ದಾರೆ. ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆಂದರೆ, ಅದಕ್ಕೆ ಅರ್ಥ ಹಾಗೂ ಮೂಲ ಇದ್ದೇ ಇರುತ್ತದೆ ಎಂದರು,

ಬಳಿಕ ಅಗತ್ಯ ಬಿದ್ದರೆ ಶೇ.40 ಕಮಿಷನ್ ಆರೋಪಗಳನ್ನು ಮರು ತನಿಖೆಗೆ ಆದೇಶಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್
ಸರ್ಕಾರ ಉರುಳಿಸಲು ಬಿಜೆಪಿ 100 ಕೋಟಿ ರೂ ಆಮಿಷ: ಗಣಿಗ ಆರೋಪ ತಳ್ಳಿಹಾಕಿದ ಕಾಂಗ್ರೆಸ್ ಶಾಸಕರು

ಲೋಕಾಯುಕ್ತ ವರದಿಯನ್ನು ಪರಿಶೀಲಿಸುತ್ತೇನೆ. ಬಳಿಕ ನಂತರದ ಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಆಗತ್ಯ ಬಿದ್ದರೆ ಮರು ತನಿಖೆಗೆ ಆದೇಶಿಸಲಾಗುವುದು ಎಂದರು.

ಕುಮಾರಸ್ವಾಮಿ ವಿರುದ್ಧ ಜಮೀರ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅವರ ಹೇಳಿಕೆಯಿಂದ ಪಕ್ಷಕ್ಕೆ ಹಾನಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.

ನಾನು ಎಐಸಿಸಿ ಶಿಸ್ತುಸಮಿತಿ ಸದಸ್ಯನಾಗಿದ್ದಾಗ, ಪಕ್ಷಕ್ಕೆ ಹಾನಿಯಾಗುವಂಥ ಹೇಳಿಕೆ ಕೊಡುವ ನಾಯಕರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೆವು. ಅಮಾನತು ಸಹ ಮಾಡುತ್ತಿದ್ದೆವು ಎಂದರು.

ಇದೇ ವೇಳೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಿರ್ಧಾರವನ್ನು ಸಮರ್ಥಿಸಿಕೊಂಡ ಅವರು, ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಮತ್ತು ನಮ್ಮ ಗ್ಯಾರಂಟಿ ಯೋಜನೆಗೂ ಸಂಬಂಧವಿಲ್ಲ. ಸರಕಾರಿ ನೌಕರರು, ತೆರಿಗೆ ಕಟ್ಟುತ್ತಿರುವವವರು, ಬಿಪಿಎಲ್ ಕಾರ್ಡ್ ಬಳಸುತ್ತಿದ್ದಾರೆ. ಅಂತಹವರು ತಾವೇ ಕಾರ್ಡ್ ವಾಪಸ್ ಮಾಡಬೇಕಾಗಿತ್ತು. ಈಗ ನಾವೇ ಅದನ್ನು ಗುರುತಿಸಿ ಪರಿಷ್ಕರಣೆ ಮಾಡುತ್ತಿದ್ದೇವೆ ಎಂದರು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com