ನ್ಯಾ.ನಾಗಮೋಹನ್ ದಾಸ್ ಆಯೋಗದ ತನಿಖೆ ಪೂರ್ಣಗೊಂಡ ಬಳಿಕ ಶೇ.40 ಕಮಿಷನ್ ಸತ್ಯಾಸತ್ಯತೆ ಬಯಲಿಗೆ ಬರಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಶೇ.40 ಕಮಿಷನ್ ಆರೋಪ ನಿರಾಧಾರ ಎಂದು ಲೋಕಾಯುಕ್ತ ಕ್ಲೀನ್ ಚಿಟ್ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 40 ಶೇ.40 ಕಮಿಷನ್ ಆರೋಪ ನಿರಾಧಾರ ಆದರೆ ನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಕ್ರಮಕ್ಕೆ ಯಾಕೆ ಸೂಚಿಸಿದೆ? ಎಂದು ಪ್ರಶ್ನಿಸಿದರು.
Priyank Kharge
ಸಚಿವ ಪ್ರಿಯಾಂಕ್ ಖರ್ಗೆ online desk
Updated on

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಸಮಗ್ರ ತನಿಖೆಯ ನಂತರ ಶೇ.40 ಕಮಿಷನ್ ಸತ್ಯಾಸತ್ಯತೆಗಳು ಬಹಿರಂಗಗೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಸೋಮವಾರ ಹೇಳಿದರು.

ಶೇ.40 ಕಮಿಷನ್ ಆರೋಪ ನಿರಾಧಾರ ಎಂದು ಲೋಕಾಯುಕ್ತ ಕ್ಲೀನ್ ಚಿಟ್ ವಿಚಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 40 ಶೇ.40 ಕಮಿಷನ್ ಆರೋಪ ನಿರಾಧಾರ ಆದರೆ ನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಕ್ರಮಕ್ಕೆ ಯಾಕೆ ಸೂಚಿಸಿದೆ? ಎಂದು ಪ್ರಶ್ನಿಸಿದರು.

300 ರೂಪಾಯಿ ಕಿಟ್‌ಗೆ 2000 ರೂ. ಕೊಟ್ಟು ಖರೀದಿ ಮಾಡಿದ್ದಾರೆ. ಅದು 40 ಪರ್ಸೆಂಟ್ ಸರ್ಕಾರ ಅಲ್ಲ. 400 ಪರ್ಸೆಂಟ್ ಸರ್ಕಾರ. ಕೋವಿಡ್ ಅಕ್ರಮದ ಬಗ್ಗೆ ನ್ಯಾ. ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯಲ್ಲಿ ಹಲವು ಬೆಚ್ಚಿ ಬೀಳಿಸುವ ಅಂಶಗಳು ಬಹಿರಂಗಗೊಂಡಿದೆ. ಯಾವ ರೀತಿಯಲ್ಲಿ ವಿದೇಶಗಳಿಂದ ಕೋವಿಡ್ ಚಿಕಿತ್ಸೆಗೆ ಉಪಕರಣಗಳನ್ನು ಹೆಚ್ಚಿನ ದರಕ್ಕೆ ತರಿಸಿಕೊಳ್ಳಲಾಯಿತು ಎಂಬುವುದನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಹೇಳಿದರು.

ಸದ್ಯ ಮೈಕಲ್ ಡಿ. ಕುನ್ಹಾ ಅವರ ವರದಿ ರಾಜ್ಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಈಗ ಮಧ್ಯಂತರ ವರದಿಯನ್ನು ಮಾತ್ರ ನೀಡಲಾಗಿದೆ. ಪೂರ್ಣ ಪ್ರಮಾಣದ ವರದಿಯಲ್ಲಿ ಮತ್ತಷ್ಟು ಅಂಶಗಳು ಬಹಿರಂಗವಾಗುವ ಸಾಧ್ಯತೆ ಇದೆ. ಈಗಾಗಲೇ ಎಸ್‌ಐಟಿ ರಚನೆಗೆ ಸಂಪುಟ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಎಸ್‌ಐಟಿ ತಂಡ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದರು.

Priyank Kharge
ನಮ್ಮ ಮನೆ ಸುಟ್ಟಿದ್ದು ರಜಾಕಾರರೇ ಹೊರತು ಮುಸ್ಲಿಮರಲ್ಲ: ಸಿಎಂ ಯೋಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬಿಜೆಪಿ ಸಂಘಟನಾತ್ಮಕವಾಗಿ ಕುಗ್ಗಿರುವ ರಾಜ್ಯಗಳಲ್ಲಿ ಇಡಿ, ಐಟಿ ಬಳಕೆಯಾಗುತ್ತಿದೆ. ಉಳಿದ ಕಡೆ ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ. ರಾಜ್ಯದಲ್ಲಿ ಆಪರೇಷನ್ ಕಮಲ ಮಾಡುತ್ತಿರುವುದಕ್ಕೆ ಸಾಕ್ಷಿ ಇದೆ ಎಂದು ಕಿಡಿಕಾರಿದರು.

ನಮ್ಮ ಪಕ್ಷದ ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಅದನ್ನು ನಮ್ಮ ಸ್ನೇಹಿತರು ನಮಗೆ ಹೇಳಿದ್ದಾರೆ. ಆದರೆ, ಅದು ಕಾರ್ಯಗತ ಆಗುವುದಿಲ್ಲ. ಬಿಜೆಪಿ ನಾಯಕರು ಸರ್ಕಾರ ಬಿಳಿಸಲು ಸಾವಿರ ಕೋಟಿ ರೆಡಿ ಇದೆ ಎನ್ನುತ್ತಾರೆ. ಹಾಗಾದರೆ ಆ ಹಣ ಎಲ್ಲಿಂದ ಬಂತು? ಸಾವಿರ ಕೋಟಿ ರೂ ಸಂಗ್ರಹ ಹೇಳಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದಾರೆ. ಆರೋಪಿತ ನಾಯಕರ ಮೇಲೆ ಮನಿ ಲಾಂಡ್ರಿಂಗ್ ಕೇಸಿಲ್ವಾ ?. ಒಂದು ಸಾವಿರ ಕೋಟಿ ರೂ. ಯಾವ ದುಡ್ಡು ಅದು? ಅದಾನಿ ದುಡ್ಡಾ ಅಥವಾ ಶೇ.40ರಷ್ಟು ಕಮಿಷನ್ ದುಡ್ಡಾ? ಎಂದು ಪ್ರಶ್ನಿಸಿದರು.

ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಸಿಎಂ ಮಾಡಿ ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿಕೆ ವಿಚಾರಕ್ಕೆ ಮಾತನಾಡಿ, ಸ್ವಾಮೀಜಿಗಳು ನಮಗೆ ಮಾರ್ಗದರ್ಶಕರಾಗಿರಬೇಕು. ಆಯಾ ಸಮುದಾಯದ ಸ್ವಾಮೀಜಿಗಳು ಅವರವರ ನಾಯಕರ ಹೆಸರನ್ನು ಸಿಎಂ ಮಾಡಿ ಎಂದು ಹೇಳುತ್ತಾರೆ. ಆದರೆ, ಮುಖ್ಯಮಂತ್ರಿಯನ್ನು ಮಾಡುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com