ಆಸ್ತಿ ಕಬಳಿಕೆ: ವಕ್ಫ್ ಬೋರ್ಡ್ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ

ನಮ್ಮ ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಆಸ್ತಿ ಕಬಳಿಕೆ: ವಕ್ಫ್ ಬೋರ್ಡ್ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ
Updated on

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ರೈತರ ಮತ್ತು ಇತರರ ಜಮೀನುಗಳನ್ನು ತನ್ನ ಆಸ್ತಿ ಎಂದು ಗುರುತಿಸುತ್ತಿರುವ ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ಗುರುವಾರ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿತು.

ನಮ್ಮ ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಕಲಬುರಗಿ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ರೈತರೊಂದಿಗೆ ಸೇರಿ ಪ್ರತಿಭಟನೆ ನಡೆಸಿದರು.

“ನಮ್ಮದು ಎರಡು ಬೇಡಿಕೆಗಳಿವೆ. ಒಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮತ್ತು ಇನ್ನೊಂದು ಬೇಡಿಕೆ ವಕ್ಫ್ ಆಸ್ತಿಗೆ ಸಂಬಂಧಿಸಿದ 1974 ರ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಆಸ್ತಿ ಕಬಳಿಕೆ: ವಕ್ಫ್ ಬೋರ್ಡ್ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ
ಚಿಕ್ಕಬಳ್ಳಾಪುರ: 100 ವರ್ಷ ಹಳೆಯದಾದ ಶಾಲೆ ವಕ್ಫ್ ಆಸ್ತಿಯಾಗಿ ಘೋಷಣೆ; ಆರ್ ಅಶೋಕ್ ಕಿಡಿ

ವಾಸ್ತವವಾಗಿ, ರಾಜ್ಯ ಸರ್ಕಾರವು ಇತ್ತೀಚೆಗೆ ರೈತರಿಗೆ ನೀಡಿದ್ದ ನೋಟಿಸ್ ಅನ್ನು ಚುನಾವಣೆಯ ಕಾರಣದಿಂದಾಗಿ ಹಿಂತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ನೋಟಿಸ್ ಹಿಂಪಡೆಯಲಾಗಿದೆ" ಎಂದು ಬಿಜೆಪಿ ಮುಖಂಡರೊಯೊಬ್ಬರು ಹೇಳಿದ್ದಾರೆ.

ಕಲಬುರಗಿಯಲ್ಲಿ ವಕ್ಫ್ ಬೋರ್ಡ್ ಅತಿಕ್ರಮಣ ವಿರೋಧಿಸಿ ಧರಣಿ ನಿರತರು, ರೈತರು, ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರೈತರ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ. ಇಂದು ಕಲಬುರಗಿಯಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ. ನಾವು ಸಚಿವ ಜಮೀರ್ ಅಹಮದ್ ಖಾನ್ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com