ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ವಿರುದ್ಧ ಸೋಲು ಕಂಡಿದ್ದ ಪಠಾಣ್ ಅವರು ಈ ಬಾರಿ 1,00,756 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಭರತ್ ಬೊಮ್ಮಾಯಿ ಅವರು 87,308 ಮತಗಳನ್ನು ಪಡೆದಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಲೋಕಸಭೆ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಶಿಗ್ಗಾಂವ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಿದೆ.
Advertisement