ಬೈ ಎಲೆಕ್ಷನ್ ಫಲಿತಾಂಶ- 2028 ರ ವಿಧಾನಸಭೆ ಚುನಾವಣೆಯ ಗೆಲುವಿಗೆ ಮುನ್ನುಡಿ: ಡಿಕೆ ಶಿವಕುಮಾರ್‌

ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಜನ ಕೊಟ್ಡಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸ ಉಳಿಯತ್ತವೆ.
Dk shivakumar
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ‌ ಹೇಳಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಹೆಚ್​ಡಿಕೆ ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಆ ಕ್ಷೇತ್ರದಲ್ಲಿ ಬಿಟ್ಟು ಹೋದ ಕುರುಹುಗಳಿಗೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲೂ ನಾವು ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು. ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಿಲ್ಲಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ, ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದರು, ಆದರೆ ಮತದಾರರು ಪ್ರಜ್ಞಾವಂತರಿದ್ದಾರೆ ಎಂದು ಹೇಳಿದರು.

ವಿಪಕ್ಷಗಳು ನಮ್ಮ ಗ್ಯಾರಂಟಿಯನ್ನು ಟೀಕೆ ಮಾಡಿದ್ದವು. ವಿಪಕ್ಷಗಳು ಟೀಕೆ ಮಾಡುವುದನ್ನು ಬಿಡಿ ಎಂದು ಜನ ತೀರ್ಪು ಕೊಟ್ಟಿದ್ದಾರೆ. ಜನರ ಬದುಕಿನ ಮೇಲೆ ರಾಜಕೀಯ ಮಾಡಬೇಡಿ ಅಂತ ಸಂದೇಶ ಜನ ಕೊಟ್ಡಿದ್ದಾರೆ. ಟೀಕೆಗಳು ಸಾಯುತ್ತವೆ ಕೆಲಸ ಉಳಿಯತ್ತವೆ. ಇದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು. ಜನರಿಗೆ ಸರಿಯಾಗಿ ಗ್ಯಾರಂಟಿ ಹೋಗುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿದ್ದವು. 56 ಸಾವಿರ ಕೋಟಿ ರೂ. ಗ್ಯಾರಂಟಿ ಗೆ ಕೊಟ್ಟಿದ್ದೇವೆ. ಪ್ರತಿ ಕ್ಷೇತ್ರಕ್ಕೆ 200 ಕೋಟಿ ರೂ. ಹಣ ಹೋಗಿದೆ. ಇದೆಲ್ಲವು ಅಭಿವೃದ್ಧಿ ಅಲ್ಲವೇ ಎಂದು ಪ್ರಶ್ನಿಸಿದರು.

Dk shivakumar
ಉಪ ಚುನಾವಣೆ: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಭರ್ಜರಿ ಗೆಲುವು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com