ಬಳ್ಳಾರಿ: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಎಸ್‌ಟಿ ಮೀಸಲು ಕ್ಷೇತ್ರ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಂಸದ ತುಕುರಾಮ್ ಅವರ ಪತ್ನಿ ಅನ್ನಪೂರ್ಣಾ ಅವರು ಜಯಭೇರಿ ಬಾರಿಸಿದ್ದಾರೆ.
ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧದ ಜಿದ್ದಾಜಿದ್ದಿನ ಹೋರಾಟದಲ್ಲಿ 9,105 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಸಂಡೂರಿನಲ್ಲಿ ಒಟ್ಟು 17 ಸುತ್ತಿನ ಮತ ಎಣಿಕೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು 88,727 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಹನುಮಂತು ಅವರು 79622 ಮತಗಳನ್ನು ಗಳಿಸಿ ಪರಭಾವಗೊಂಡಿದ್ದಾರೆ.
ಸಂಡೂರು ಶಾಸಕರಾಗಿದ್ದ ಇ ತುಕಾರಾಂ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಈಗ ಅವರ ಪತ್ನಿ ಸಹ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ.
Advertisement