ಅಪಪ್ರಚಾರ, ಸುಳ್ಳು ಆರೋಪ ಮೆಟ್ಟಿನಿಂತು ಸಾಧಿಸಿದ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದಿದ್ದಾರೆ.
 ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಉಪ ಚುನಾವಣೆಯ ಫಲಿತಾಂಶದ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದಿದ್ದಾರೆ.

ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನಾನು ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

 ಸಿದ್ದರಾಮಯ್ಯ
ಕರ್ನಾಟಕ ಉಪಚುನಾವಣೆ ಫಲಿತಾಂಶ: ಆಡಳಿತಾರೂಢ ಕಾಂಗ್ರೆಸ್‌ ಕ್ಲೀನ್ ಸ್ವೀಪ್; ಎನ್ ಡಿಎಗೆ ಮುಖಭಂಗ

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com