ಚನ್ನಪಟ್ಟಣ ಉಪ ಚುನಾವಣೆ ಗೆಲ್ಲಲು ಬಿಜೆಪಿ, ಜೆಡಿಎಸ್ ನಾಯಕರ ನೆರವು: ಡಿಸಿಎಂ ಡಿಕೆ ಶಿವಕುಮಾರ್

ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ ಡಿಎ ಸೇರಿತ್ತು. ಒಂದು ವೇಳೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಮಗೆ ಬೆಂಬಲ ನೀಡಿದ್ದರೆ, ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರುತ್ತಿರಲಿಲ್ಲ.
DCM DK Shivakumar
ಡಿಸಿಎಂ ಡಿಕೆ ಶಿವಕುಮಾರ್
Updated on

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಸೋಲುವಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನೆರವು ನೀಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭಾನುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶನಿವಾರ ಪ್ರಕಟವಾದ ಉಪ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಅವರು 25, 413 ಮತಗಳ ಅಂತರದಿಂದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜೆಡಿಎಸ್ ಬಿಜೆಪಿ ನೇತೃತ್ವದ ಎನ್ ಡಿಎ ಸೇರಿತ್ತು. ಒಂದು ವೇಳೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಮಗೆ ಬೆಂಬಲ ನೀಡಿದ್ದರೆ, ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬರುತ್ತಿರಲಿಲ್ಲ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂತ ಅಶ್ವಥ್ ನಾರಾಯಣ್ ಹೇಳಿಲ್ವಾ, ಇದರ ಅರ್ಥ ಏನು? ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಕ್ಷೇತ್ರ ಖಾಲಿ ಆದಾಗಿನಿಂದ ಸಾಕಷ್ಟು ಪ್ರವಾಸ ಮಾಡಿದಿವಿ. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ವೊ ಅದನ್ನ ಮೊದಲು ಜಾರಿ ಮಾಡಬೇಕು. ನಾನು ಯೋಗೇಶ್ವರ್ ಕೂತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕ ವಿಧಾನಸಭೆಯಲ್ಲಿ 19 ಸ್ಥಾನಗಳನ್ನು ಹೊಂದಿದ್ದ ಜೆಡಿಎಸ್ ಈಗ 18ಕ್ಕೆ ಕುಸಿದಿದೆ ಎಂದು ವ್ಯಂಗ್ಯವಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಸಿ ಪಿ ಯೋಗೀಶ್ವರ ಪರ ಜನರ ತೀರ್ಪು ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಮಧ್ಯೆ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿಕೆ ಶಿವಕುಮಾರ್ ಈ ರೀತಿಯ ಹೇಳಿಕೆ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನಡುವೆ ತಂದಿಕ್ಕುವ ಕೆಲಸ ಮಾಡುತ್ತಿದ್ದಾರೆ. ಅವರು ನಮ್ಮ ನಡುವೆ ಕೆರಳಿಸುವ ಪ್ರಯತ್ನ ಮಾಡಬಾರದು ಎಂದು ಹೇಳಿದರು.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಸೋಲಿಗೆ ಯಾರು ಹೊಣೆ? ಅದು ಕಾಂಗ್ರೆಸ್ ಅಲ್ಲವೇ? ಸಿದ್ದರಾಮಯ್ಯ ಅಲ್ಲವೇ? ಅದನ್ನು ಡಿಕೆ ಶಿವಕುಮಾರ್ ಒಪ್ಪಿಕೊಳ್ಳುತ್ತಾರೆಯೇ? ಅವರು ಒಪ್ಪಿಕೊಂಡರೆ ಅದರ ಬಗ್ಗೆ ಮಾತನಾಡುತ್ತೇನೆ” ಎಂದು ಅಶೋಕ ಹೇಳಿದರು.

DCM DK Shivakumar
ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಇಲ್ಲದ ಕಾರಣ ಶಿವಕುಮಾರ್ ಬಿಜೆಪಿಯಿಂದ ಸಿಪಿ ಯೋಗೀಶ್ವರ ಅವರನ್ನು ಕಣಕ್ಕಿಳಿಸಿದ್ದರು. ಚನ್ನಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿಗದೇ ಬಿಜೆಪಿಯ ಸಿ.ಪಿ. ಯೋಗೇಶ್ವರ್ ಅವರನ್ನು ಖರೀದಿಸಿ ಚುನಾವಣೆಗೆ ನಿಲ್ಲಿಸಿದ್ದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಲ್ಲವೇ? ಎಂದು ಪ್ರಶ್ನಿಸಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಮುನ್ನ ಯೋಗೀಶ್ವರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com