ಅಹಿಂದ ಮತಗಳ ಬಲವರ್ಧನೆಯಿಂದ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು: ಸತೀಶ್‌ ಜಾರಕಿಹೊಳಿ

ಶಿಗ್ಗಾಂವಿಯಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಮತ್ತು ಒಬಿಸಿಗಳನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸಲು ಪರಿಣಾಮಕಾರಿ ಕಾರ್ಯತಂತ್ರವನ್ನು ರೂಪಿಸಲಾಗಿತ್ತು. ಕ್ಷೇತ್ರದಾದ್ಯಂತ ಪಕ್ಷದ ಪ್ರಚಾರಕ್ಕಾಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿದ್ದರು.
ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಳಗಾವಿ: ಅಹಿಂದ ಮತಗಳ ಯಶಸ್ವಿ ಕ್ರೋಡೀಕರಣವು ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹಿಂದೂ-ಮುಸ್ಲಿಂ ರಾಜಕಾರಣವನ್ನು ಹತ್ತಿಕ್ಕಲು ಕಾಂಗ್ರೆಸ್ ಯತ್ನ ನಡೆಸಿದ್ದು, ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಪಕ್ಷದ ಅಭ್ಯರ್ಥಿ ಯಾಸೀರ್ ಪಠಾಣ್ ಅವರ ಗೆಲುವು ಕಾಂಗ್ರೆಸ್ ಪಕ್ಷದ ಮೇಲಿನ ಮುಸ್ಲಿಮರ ವಿಶ್ವಾಸವನ್ನು ಹೆಚ್ಚಿಸಿದೆ. ಶಿಗ್ಗಾಂವಿಯಲ್ಲಿ ಎಲ್ಲಾ ಹಿಂದುಳಿದ ವರ್ಗಗಳು ಮತ್ತು ಒಬಿಸಿಗಳನ್ನು ಒಗ್ಗೂಡಿಸಿ ಬಿಜೆಪಿಯನ್ನು ಸೋಲಿಸಲು ಪರಿಣಾಮಕಾರಿ ಕಾರ್ಯತಂತ್ರವನ್ನು ರೂಪಿಸಲಾಗಿತ್ತು. ಕ್ಷೇತ್ರದಾದ್ಯಂತ ಪಕ್ಷದ ಪ್ರಚಾರಕ್ಕಾಗಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಿದ್ದರು.

ಸಚಿವ ಸತೀಶ್ ಜಾರಕಿಹೊಳಿ
ಉಪಚುನಾವಣೆ ಫಲಿತಾಂಶ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಸರ್ಕಾರದ ಎಲ್ಲ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನವೂ ಪಠಾಣ್ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಶಿಗ್ಗಾಂವಿಯಲ್ಲಿ ನಾಯಕತ್ವದ ಬಿಕ್ಕಟ್ಟಿನಿಂದಾಗಿ ಅಲ್ಲಿನ ಐದೂ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಕಂಡಿತ್ತು. ಹೀಗಾಗಿ ಬಹುತೇಕ ಸಮೀಕ್ಷೆಗಳು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಸೋಲು ಕಾಣುವ ಭವಿಷ್ಯ ನುಡಿದಿತ್ತು. ಆದರೆ, ಪಕ್ಷದ ಪ್ರಬಲ ಪ್ರಚಾರ ಕೊನೆಗೂ ಫಲ ನೀಡಿದೆ ಎಂದರು.

ಧರ್ಮದ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಹಲವು ಚುನಾವಣೆಯನ್ನು ಗೆದ್ದಿದೆ. ಆದರೆ, ಈ ಬಾರಿ ಬಿಜೆಪಿಗೆ ಧರ್ಮ ರಾಜಕಾರಣದಿಂದ ಯಾವುದೇ ಪ್ರಯೋಜನವಾಗಿಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಇದೇ ರೀತಿಯ ಕಾರ್ಯತಂತ್ರವನ್ನು ರೂಪಿಸಿದ್ದೆವು. ಶಿಗ್ಗಾಂವಿಯಲ್ಲೂ ಈ ತಂತ್ರ ಸಹಾಯ ಮಾಡಿದೆ. ಶಿಗ್ಗಾಂವಿ ಗೆಲುವು ಪಕ್ಷಕ್ಕೆ ದೊಡ್ಡ ಉತ್ತೇಜನ ನೀಡಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com