ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ: ನಿಖಿಲ್ ಸೋಲಿನ ಚರ್ಚೆಯಿಂದ ದೂರ ಉಳಿದ ಹೆಚ್.ಡಿ ದೇವೇಗೌಡ!

ತಾವು ದೆಹಲಿಗೆ ಭೇಟಿ ನೀಡುತ್ತಿದ್ದು, ಅಲ್ಲಿಂದ ಬಂದ ಬಳಿಕ ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ಮುಖಂಡರ ಜೊತೆ ಸಭೆ ಮಾಡುತ್ತೇನೆ. ಆಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ.
HD DEVEGOWDA
ಹೆಚ್.ಡಿ. ದೇವೇಗೌಡ
Updated on

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದು, ಆ ಕುರಿತು ಪ್ರತಿಕ್ರಿಯಿಸಲು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ನಿರಾಕರಿಸಿದ್ದಾರೆ.

ಶನಿವಾರ ಪ್ರಕಟವಾದ ಫಲಿತಾಂಶದ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ ಯೋಗೀಶ್ವರ್ ವಿರುದ್ಧ ನಿಖಿಲ್ 25,413 ಮತಗಳ ಅಂತರದಿಂದ ಸೋತಿದ್ದಾರೆ. ನಿಖಿಲ್ ಅವರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ಮತ್ತು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರ ಮೊಮ್ಮಗ ಆಗಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ಡಿ. ದೇವೇಗೌಡ, ಇಂದು ಮಹಾನ್‌ ಆಧ್ಯಾತಿಕ ಗುರು ರಾಮಾನುಜಾಚಾರ್ಯರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಈ ಪವಿತ್ರ ಕಾರ್ಯಕ್ರಮದಲ್ಲಿ ರಾಜಕೀಯದ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಸಲಹೆ ನೀಡಿದರು.

ತಾವು ದೆಹಲಿಗೆ ಭೇಟಿ ನೀಡುತ್ತಿದ್ದು, ಅಲ್ಲಿಂದ ಬಂದ ಬಳಿಕ ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ಮುಖಂಡರ ಜೊತೆ ಸಭೆ ಮಾಡುತ್ತೇನೆ. ಆಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅತ್ಯಂತ ಶ್ರೇಷ್ಠ ಕಾರ್ಯಕ್ರಮದಲ್ಲಿ ರಾಜಕೀಯ ಬೇಡ ಎಂದರು.

ರಾಮಾನುಜಾಚಾರ್ಯರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ನಮ ಪುಣ್ಯ. ಇದಕ್ಕೆ ಅವಕಾಶ ಮಾಡಿಕೊಟ್ಟವರಿಗೆ ತುಂಬು ಹೃದಯದ ಧನ್ಯವಾದಗಳು. ರಾಮಾನುಜಾಚಾರ್ಯರು ತಳಮಟ್ಟದಲ್ಲಿದ್ದವರನ್ನು ಮೇಲಕ್ಕೆ ತರಿಸುವ ಸದ್ಗುಣ ಹೊಂದಿದ್ದರು. ರಾಮಾನುಜಾಚಾರ್ಯರ ತತ್ವಾದರ್ಶಗಳು ಅತ್ಯಂತ ಉನ್ನತವಾದವು ಎಂದು ಹೇಳಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಮಗನ ಸೋಲಿನ ಬಗ್ಗೆ ಮಾತನಾಡುವುದಿಲ್ಲ. ಚನ್ನಪಟ್ಟಣ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ. ಜನರು ತಮ್ಮ ತೀರ್ಪನ್ನು ನೀಡಿದ್ದಾರೆ ಮತ್ತು ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

HD DEVEGOWDA
ಚನ್ನಪಟ್ಟಣ ಉಪ ಚುನಾವಣೆ ಗೆಲ್ಲಲು ಬಿಜೆಪಿ, ಜೆಡಿಎಸ್ ನಾಯಕರ ನೆರವು: ಡಿಸಿಎಂ ಡಿಕೆ ಶಿವಕುಮಾರ್

ನಿಖಿಲ್ ಈ ಹಿಂದೆ 2019 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸೋತಿದ್ದರು. ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಎ ಇಕ್ಬಾಲ್ ಹುಸೇನ್ ವಿರುದ್ಧ ಸೋತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com