ಜನಾದೇಶ ಸಿದ್ದರಾಮಯ್ಯ ನಾಯಕತ್ವಕ್ಕೆ ಸಿಕ್ಕಿರುವುದಲ್ಲ, ಹಗರಣಗಳು ಮುಚ್ಚಿ ಹೋಗಲ್ಲ: MLC ವಿಶ್ವನಾಥ್

ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ. ಈ ತೀರ್ಪಿನಿಂದ ಹಗರಣಗಳು ಮುಚ್ಚಿ ಹೋಗುವುದಿಲ್ಲ, ಗೆದ್ದವರು ಬೀಗುವ ಅಗತ್ಯವೂ ಇಲ್ಲ.
ಎಹೆಚ್ ವಿಶ್ವನಾಥ್
ಎಹೆಚ್ ವಿಶ್ವನಾಥ್
Updated on

ಮೈಸೂರು: ಜನಾದೇಶ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಸಿಕ್ಕಿಲ್ಲ. ಇದರಿಂದ ಹಗರಣಗಳು ಮುಚ್ಚಿ ಹೋಗುವುದಿಲ್ಲ ಎಂದು ಬಿಜೆಪಿ ಎಂಎಲ್'ಸಿ ಎ ಎಚ್ ವಿಶ್ವನಾಥ್ ಅವರು ಶನಿವಾರ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಇದು ಸಿದ್ದರಾಮಯ್ಯ ಆಡಳಿತಕ್ಕೆ ಜನ ಕೊಟ್ಟ ತೀರ್ಪಲ್ಲ. ಈ ತೀರ್ಪಿನಿಂದ ಹಗರಣಗಳು ಮುಚ್ಚಿ ಹೋಗುವುದಿಲ್ಲ, ಗೆದ್ದವರು ಬೀಗುವ ಅಗತ್ಯವೂ ಇಲ್ಲ ಎಂದು ಹೇಳಿದರು.

ಹಣ, ಹೆಂಡ, ಶಿಫಾರಸ್ಸು ಇಂತಹದರ ಮೇಲೆಯೆ ಚುನಾವಣೆ ನಡೆಯುತ್ತದೆ. ಈ ಚುನಾವಣೆಯೂ ಅದೇ ರೀತಿ ನಡೆದಿದೆ. ಮುಡಾ ಹಗರಣ ಮೈಸೂರು ವ್ಯಾಪ್ತಿಯದ್ದು, ಹೀಗಾಗಿ ಅದು ಚನ್ನಪಟ್ಟಣದಲ್ಲಿ ವರ್ಕ್ ಆಗುತ್ತೆ ಅಂದುಕೊಳ್ಳುವುದು ಬೇಡ. ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಕೊಟ್ಟ ತೀರ್ಪು ಇದಲ್ಲ. ಉಪಚುನಾವಣೆಗಳು ಯಾವ ರೀತಿ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಗರಣಗಳ ಕಳಂಕ ಹೊತ್ತವರು ಕುಣಿದು ಕುಪ್ಪಳಿಸುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ಎಹೆಚ್ ವಿಶ್ವನಾಥ್
ಕರ್ನಾಟಕ ಉಪಚುನಾವಣೆ ಫಲಿತಾಂಶ: ಆಡಳಿತಾರೂಢ ಕಾಂಗ್ರೆಸ್‌ ಕ್ಲೀನ್ ಸ್ವೀಪ್; ಎನ್ ಡಿಎಗೆ ಮುಖಭಂಗ

ಚನ್ನಪಟ್ಟಣದಲ್ಲಿ ನಿಖಿಲ್ ಸೋತಿದ್ದಾರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದೆಲ್ಲ ಸಾಮಾನ್ಯ. ಬಿಜೆಪಿಯವರು ಜೆಡಿಎಸ್ ಒಟ್ಟಾಗಿ ಕೆಲಸ ಮಾಡಿದರು, ಆದರೂ ಅದು ಫಲಕೊಟ್ಟಿಲ್ಲ. ಬಿಜೆಪಿ 4 ಗುಂಪು ಇರೋದು ಸತ್ಯ. ಅವಕಾಶ ಕೊಟ್ಟವರಿಗೆ ಮತ್ತೆ ಮತ್ತೆ ಅವಕಾಶ ಕೊಟ್ಟಿದ್ದಾರೆ. ಇದೀಗ ತಪ್ಪುಗಳನ್ನು ಸರಿಪಡಿಸುವ ಮತ್ತು ಪುಟಿದೇಳುವ ಸಮಯ ಬಂದಿದೆ ಎಂದು ಹೇಳಿದರು.

ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕೃಷ್ಣರಾಜ ಶಾಸಕ ಟಿ ಎಸ್ ಶ್ರೀವತ್ಸ ಆಘಾತ ವ್ಯಕ್ತಪಡಿಸಿದ್ದಾರೆ.

ಎರಡು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿತ್ತು. ಆದರೆ ಮುಡಾ ಮತ್ತು ವಾಲ್ಮೀಕಿ ಹಗರಣಗಳ ನಡುವೆಯೂ ಕಾಂಗ್ರೆಸ್ ಎಲ್ಲಾ ಸ್ಥಾನಗಳನ್ನು ಗೆದ್ದಿುವುದು ನಿರೀಕ್ಷೆಗಳು ಹುಸಿಯಾಗುವಂತೆ ಮಾಡಿದೆ ಎಂದು ಹೇಳಿದರು.

ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಮತ್ತು ಪಕ್ಷವು ಉತ್ತಮ ಫಲಿತಾಂಶವನ್ನು ಸಾಧಿಸಬೇಕು ಎಂದು ತಿಳಿಸಿದರು.

ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಜನಾದೇಶವನ್ನು ಗೌರವಿಸಬೇಕು. ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ ಹೊಂದಿತ್ತು. ಸೋಲು ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿದರು\

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com