ಹೋರಾಟ ಕೈಬಿಡಿ, ಪಕ್ಷ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಯತ್ನಾಳ್ ಬಣಕ್ಕೆ ಬಿಎಸ್ ವೈ ಮನವಿ

ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಸೋಲಿನಿಂದ ನಿರೀಕ್ಷೆ ಮೀರಿ ಹಿನ್ನಡೆಯಾಗಿದೆ. ಪಕ್ಷದ ಸೋಲಿನ ಜವಾಬ್ದಾರಿಯನ್ನು ಎಲ್ಲರೂ ಹೊರಬೇಕು.
ಯಡಿಯೂರಪ್ಪ ಮತ್ತು ಯತ್ನಾಳ್
ಯಡಿಯೂರಪ್ಪ ಮತ್ತು ಯತ್ನಾಳ್
Updated on

ಬೆಂಗಳೂರು: ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಕೆಲ ಬಿಜೆಪಿ ನಾಯಕರ ಗುಂಪು ವಕ್ಫ್ ವಿಚಾರವಾಗಿ ಪ್ರತ್ಯೇಕ ಹೋರಾಟ ನಡೆಸುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು, ಹೋರಾಟ ಕೈಬಿಟ್ಟು ಪಕ್ಷ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮಂಗಳವಾರ ಮನವಿ ಮಾಡಿದ್ದಾರೆ.

ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಸೋಲಿನಿಂದ ನಿರೀಕ್ಷೆ ಮೀರಿ ಹಿನ್ನಡೆಯಾಗಿದೆ. ಪಕ್ಷದ ಸೋಲಿನ ಜವಾಬ್ದಾರಿಯನ್ನು ಎಲ್ಲರೂ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

"ಪ್ರತ್ಯೇಕವಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ನಮ್ಮೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರರಿಗೆ ಮನವಿ ಮಾಡಿದ್ದಾರೆ. ಹೀಗಿದ್ದರೂ ಅವರು ತಮ್ಮ ಸ್ವಾಭಿಮಾನದಿಂದ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ" ಎಂದು ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ ಮತ್ತು ಯತ್ನಾಳ್
ವಕ್ಫ್ ವಿರುದ್ದ ಒಂದು ತಿಂಗಳ ಕಾಲ ಜನಜಾಗೃತಿ ಅಭಿಯಾನ ಆರಂಭಿಸಿದ ಬಿಜೆಪಿ ಶಾಸಕ ಯತ್ನಾಳ್

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಬಲವರ್ಧನೆಗೊಳಿಸಲು ಈಗಲಾದರೂ ಮುಂದೆ ಬಂದು ಸಹಕರಿಸುವಂತೆ ಮನವಿ ಮಾಡುತ್ತೇನೆ.

ರಾಜ್ಯದ ಪ್ರಸ್ತುತ ನಾಯಕತ್ವದೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಲು ಯತ್ನಾಳ್ ಬಣ ಸಿದ್ಧವಿಲ್ಲ. ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, "ನಾವು ನಮ್ಮ ಕರ್ತವ್ಯವನ್ನು ಮಾಡುತ್ತೇವೆ. ಉಳಿದದ್ದು ಅವರಿಗೆ ಮತ್ತು ಕೇಂದ್ರಕ್ಕೆ ಬಿಟ್ಟದ್ದು. ಹೈಕಮಾಂಡ್‌ಗೆ ಎಲ್ಲವೂ ಗೊತ್ತು ಎಂದರು.

ಯತ್ನಾಳ್ ನೇತೃತ್ವದ ಬಣದಲ್ಲಿ ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ ಪಿ ಹರೀಶ್, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಜಿ ಎಂ ಸಿದ್ದೇಶ್ವರ ಮತ್ತಿತರರು ಇದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com