ಆಂತರಿಕ ಬಿಕ್ಕಟ್ಟನ್ನು ಮುಚ್ಚಿಹಾಕಲು ಬಿಜೆಪಿ ರಾಜ್ಯ ಸರ್ಕಾರ ಮೇಲೆ ಆರೋಪ ಮಾಡುತ್ತಿದೆ: ವಿ ಎಸ್ ಉಗ್ರಪ್ಪ

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ವಕ್ಫ್ ಮಂಡಳಿಯಿಂದ ರೈತರಿಗೆ ಸುಮಾರು 2 ಸಾವಿರ ನೋಟಿಸ್ ನೀಡಿದ್ದರೆ, ಹಿಂದಿನ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 500 ನೋಟಿಸ್‌ಗಳನ್ನು ನೀಡಲಾಗಿತ್ತು ಎಂದರು.
V S Ugrappa
ವಿ ಎಸ್ ಉಗ್ರಪ್ಪ
Updated on

ಬೆಂಗಳೂರು: ಬಿಜೆಪಿಯ ಆಂತರಿಕ ಗೊಂದಲವನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ. ಇಡೀ ರಾಜ್ಯವು ಬಿಜೆಪಿಯಲ್ಲಿ ಆಂತರಿಕ ಕಲಹ ಮತ್ತು ಭ್ರಷ್ಟಾಚಾರವನ್ನು ಕಂಡಿದೆ, ಆದರೆ ಅವರು ಪದೇ ಪದೇ ಮುಡಾ ಪ್ರಕರಣ ಮತ್ತು ವಕ್ಫ್ ಸಮಸ್ಯೆಯನ್ನು ಎತ್ತುತ್ತಿದ್ದಾರೆ ಎಂದರು.

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ವಕ್ಫ್ ಮಂಡಳಿಯಿಂದ ರೈತರಿಗೆ ಸುಮಾರು 2 ಸಾವಿರ ನೋಟಿಸ್ ನೀಡಿದ್ದರೆ, ಹಿಂದಿನ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ 500 ನೋಟಿಸ್‌ಗಳನ್ನು ನೀಡಲಾಗಿತ್ತು ಎಂದರು.

ಈ ಎಲ್ಲಾ ತಪ್ಪುಗಳು ಅವರದ್ದೇ ಆಗಿದ್ದು, ಬಿಜೆಪಿ ರಾಜ್ಯ ಸರ್ಕಾರದತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ ಮತ್ತು ಯತ್ನಾಳ್ ನಡುವೆ ಮಾರಾಮಾರಿ ನಡೆಯುತ್ತಿದ್ದರೂ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

ಉದ್ಯಮಿ ಗೌತಮ್ ಅದಾನಿ ಸೋಲಾರ್ ಯೋಜನೆ ಹಗರಣ ವಿಶ್ವದಾದ್ಯಂತ ಚರ್ಚೆಯಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚೆಗೆ ಅವಕಾಶ ನೀಡದೆ ಪರೋಕ್ಷವಾಗಿ ಅದಾನಿ ಮತ್ತು ಅವರ ತಂಡವನ್ನು ರಕ್ಷಿಸುತ್ತಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ವಕ್ಫ್ ಜಮೀನು ವಿಚಾರವಾಗಿ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ಈಗ ಕುಮಾರ್ ಬಂಗಾರಪ್ಪ ಮತ್ತು ಯತ್ನಾಳ್ ವಕ್ಫ್ ಸಮಿತಿ ಸರಿಯಿಲ್ಲ ಎನ್ನುತ್ತಿದ್ದಾರೆ ಎಂದು ಖಾತರಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com