ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ: ಸಚಿವ ಸಂಪುಟ ಪುನಾರಚನೆ ಸರ್ಕಸ್; ನಾಗೇಂದ್ರಗೆ ಮತ್ತೆ ಮಂತ್ರಿ ಸ್ಥಾನ?

ಮಾಜಿ ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಸಿಎಂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ನವದೆಹಲಿಗೆ ತೆರಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿವೆ. ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದಾರೆ.

ಬಲ್ಲ ಮೂಲಗಳ ಪ್ರಕಾರ, ಮಾಜಿ ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಸಿಎಂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳುವುದಲ್ಲದೆ, ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಎಲ್‌ಪಿ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಉನ್ನತ ಮಟ್ಟದ ನಾಯಕರೊಂದಿಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಮುಡಾ ಮತ್ತು ಎಸ್‌ಟಿ ಕಾರ್ಪೊರೇಷನ್‌ನಲ್ಲಿ ನಡೆದ ವಿವಿಧ ಹಗರಣಗಳ ಬಿಸಿ ಎದುರಿಸುತ್ತಿರುವ ಸಿದ್ದರಾಮಯ್ಯ ಅವರು ಇತ್ತೀಚೆಗೆ ನಡೆದ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ನಂತರ ಆತ್ಮವಿಶ್ವಾಸದಿಂದ ಬೀಗುತ್ತಿದ್ದಾರೆ.

ಎಸ್‌ಟಿ ಕಾರ್ಪೊರೇಷನ್ ಬಹುಕೋಟಿ ಹಗರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ನೀಡಿರುವುದರಿಂದ, ಮಾಜಿ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನಾಗೇಂದ್ರ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು.

ಸಿದ್ದರಾಮಯ್ಯನವರಿಗೆ ಸಂಪುಟ ಪುನಾರಚನೆಯ ತುರ್ತು ಇಲ್ಲ ಮತ್ತು ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲವಾದ್ದರಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಲು ಹೈಕಮಾಂಡ್‌ಗೆ ಯಾವುದೇ ತುರ್ತು ಇಲ್ಲ" ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

“ಸಿದ್ದರಾಮಯ್ಯನವರು ವಿಧಾನಸಭೆ ಅಧಿವೇಶನಕ್ಕೆ ಮುನ್ನ ಪುನರ್ ರಚನೆ ಮಾಡಿದರೆ, ಒಡೆದ ಮನೆಯಾಗಿರುವ ಬಿಜೆಪಿಗೆ ಪ್ರಬಲ ಅಸ್ತ್ರ ನೀಡಿದಂತಾಗುತ್ತದೆ. ಮಂತ್ರಿಗಳು ಭ್ರಷ್ಟರು ಮತ್ತು ಅಸಮರ್ಥರಾಗಿದ್ದರಿಂದ ಪುನರ್ರಚನೆ ಅಗತ್ಯವಾಗಿದೆ ಎಂದು ಬಿಜೆಪಿ ಪ್ರತಿಪಾದಿಸುತ್ತದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯನವರ ಫ್ರೈಡೇ ಮ್ಯಾನ್ ಮತ್ತು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ, ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ-ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮುಂಚೂಣಿಯಲ್ಲಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನಗೂ ಅರ್ಹತೆ ಇದೆ ಎಂದು ಸಹಕಾರ ಸಚಿವ ಹಾಗೂ ಎಸ್ಟಿ ನಾಯಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಕ್ಷದಲ್ಲಿ ಡಿಕೆ ಶಿವಕುಮಾರ್ ಅವರ ಸ್ಥಾನಮಾನಕ್ಕೆ ಸರಿಸಾಟಿಯಾಗಬಲ್ಲ ನಾಯಕರೊಬ್ಬರಿದ್ದಾರೆ, ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಬಹುದು ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆಯಾಗುವವರೆಗೂ ಹೊಸ ಕೆಪಿಸಿಸಿ ಅಧ್ಯಕ್ಷರನ್ನು ಆತುರದಿಂದ ನೇಮಿಸುವ ನಿರೀಕ್ಷೆಯಿಲ್ಲ. ಪಕ್ಷ ಹದಗೆಟ್ಟಾಗ ಶಿವಕುಮಾರ್ ಕಷ್ಟಪಟ್ಟು ಪಕ್ಷ ಸಂಘಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com