ಬೆಂಗಳೂರು: ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.
ವಿಧಾನ ಪರಿಷತ್ ಉಪಚುನಾವಣೆಗೆ ರಾಜು ಪೂಜಾರಿ ಬೈಂದೂರು ಅವರು ಕಾಂಗ್ರೆಸ್ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಟಿಕೆಟ್ ನೀಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಇದೇ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ.
ಅಕ್ಟೋಬರ್ 21 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement