ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕೆಂದು ಸಿದ್ದರಾಮಯ್ಯ ಪಟಾಲಂ ತಿರುಕನ ಕನಸು ಕಾಣುತ್ತಿದೆ: HDK

ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 

ಬೆಂಗಳೂರು: ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಈ ಹಿಂದೆ ಇದೇ ಸಿದ್ದರಾಮಯ್ಯರ ಪಟಾಲಂ ಸಂಚು ಹೂಡಿತ್ತು. ಇದೀಗ ಅವರ ಪಟಾಲಂ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್‌ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ ಎಂದು ದೂರಿದರು. ನಾನು ಜಾಮೀನು ತೆಗೆದುಕೊಂಡಿದ್ದೇನೆ, ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ, ಈ ಸರಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ. ಮೂರ್ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಟೀಕಿಸಿದರು.

80 ಕೋಟಿ ರೂ.ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್‍ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್‍ಗೆ ಲೀಕ್ ಮಾಡಿರುವ ಹಿನ್ನಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

ಎಚ್.ಡಿ ಕುಮಾರಸ್ವಾಮಿ
14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ ಸಿದ್ದು ಪತ್ನಿ; ಹಂದಿ ಹೇಳಿಕೆ; ADGP ಚಂದ್ರಶೇಖರ್ ವಿರುದ್ಧ ಅಮಿತ್ ಶಾಗೆ HDK ದೂರು!

ನಾನು ಆ ಪೊಲಿಸ್ ಅಧಿಕಾರಿಯ ಉದ್ದಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಇಂತಹ ಅಧಿಕಾರಿಗಳು ಸರಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಸಲುವಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2. ಹೈಕೋರ್ಟ್‍ನಲ್ಲಿ ತನಿಖೆಗೆ ತಡೆಯಾಜ್ಞೆ ತೆಗೆದಯಕೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು ಗಣಿಗಾರಿಕೆ ಪ್ರಕರಣದಲ್ಲಿ ಸಂಡೂರು ತಾಲೂಕಿನಲ್ಲಿ ಎಸ್‌ಎಸ್‌ವಿಎಂಗೆ 550 ಎಕರೆ ಭೂಮಿಯನ್ನು ಗುತ್ತಿಗೆ ನೀಡುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ನೀಡಿದ ಶಿಫಾರಸ್ಸನ್ನು ಕುಮಾರಸ್ವಾಮಿ ಸರ್ಕಾರ ಬೈಪಾಸ್ ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಭೂಮಿಗಾಗಿ ಇತರ 29 ಅರ್ಜಿದಾರರನ್ನು ಸೋಲಿಸಿದ ಗಣಿಗಾರಿಕೆ ಸಂಸ್ಥೆಯು ನೋಂದಣಿಯಾಗದ ಘಟಕವಾಗಿದೆ.

ಜಯಚಂದ್ರ ಅವರು ಅಧಿಕೃತ ಪತ್ರದಲ್ಲಿ ಸಂಸ್ಥೆಯ ಮಾಲೀಕ ವಿನೋದ್ ಗೋಯೆಲ್ ಅವರ ಹೆಸರನ್ನು ಅಕ್ರಮವಾಗಿ ಸೇರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಜಯಚಂದ್ರ ಅವರ ಆಪಾದಿತ ಸಹಚರ ಮತ್ತು ಇಲಾಖೆಯ ಗುಮಾಸ್ತ ಜವರೇಗೌಡ ಅವರು ಮೂಲ ಎಸ್‌ಎಸ್‌ವಿಎಂ ದಾಖಲೆಗಳನ್ನು ಪರಿಶೀಲಿಸದೆ ಅದನ್ನು ಜಾರಿಗೊಳಿಸಿದ್ದಾರೆಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com