
ಬೆಂಗಳೂರು: ಬಿಜೆಪಿ ನಾಯಕ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ನೀತಿಗಳ ವಿರುದ್ಧ ಮಾತನಾಡುತ್ತಿದ್ದು, ಅವರ ಇತ್ತೀಚಿನ ಹೇಳಿಕೆಗಳನ್ನು ಕೇಂದ್ರ ನಾಯಕರು ಗಮನಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ವಿಷಯಗಳು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕೆ ಹೊರತು ಸಾರ್ವಜನಿಕವಾಗಿ ಅಲ್ಲ. ಬಿಜೆಪಿ ಹೈಕಮಾಂಡ್ ಯತ್ನಾಳ್ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂದು ಕೇಳಿದ್ದಕ್ಕೆ, ಈ ರೀತಿ ಉತ್ತರಿಸಿದರು.
ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಆಂತರಿಕವಾಗಿಯೇ ಬಗೆಹರಿಸಿಕೊಳ್ಳಬೇಕು ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ನೇಮಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದ ಅವರು, ಎಲ್ಲ ರಂಗಗಳಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಹೋರಾಟದತ್ತ ಎಲ್ಲ ಬಿಜೆಪಿ ನಾಯಕರು ಹೆಚ್ಚು ಗಮನ ಹರಿಸಬೇಕು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಸ್ತುತ ಬೆಳವಣಿಗೆಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ ಎಂದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅವರ ವಿರುದ್ಧ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮಾತ್ರ ಸಾಧ್ಯ ಎಂದು ಪ್ರಹ್ಲಾದ್ ಜೋಶಿ ಹಾಗೂ ಶ್ರೀನಿವಾಸ ಪೂಜಾರಿ ಹೇಳಿದರು.
Advertisement