
ಬೆಂಗಳೂರು: 2028 ರ ಮೊದಲು ಕರ್ನಾಟಕವು ಕ್ಷಿಪ್ರ ವಿಧಾನಸಭೆ ಚುನಾವಣೆಯ ಎದುರಿಸಬಹುದು ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.
ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ನಾವು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ, ಪಾಪಗಳ ಕೊಡ ತುಂಬಿರುವುದರಿಂದ ಕಾಂಗ್ರೆಸ್ ಸರ್ಕಾರ ತನ್ನಷ್ಟಕ್ಕೆ ತಾನೇ ಪತನಗೊಳ್ಳುತ್ತದೆ. 2028ರ ವರೆಗೆ ಚುನಾವಣೆಗೆ ಕಾಯುವ ಅಗತ್ಯವಿಲ್ಲ, ಅದಕ್ಕೂ ಮುನ್ನ ಚುನಾವಣೆ ಎದುರಿಸಬಹುದು ಎಂದು ಹೇಳಿದರು.
ಚುನಾವಣೆ ನಡೆದರೆ ರಾಮನಗರ ಜಿಲ್ಲೆಯ ನಾಲ್ಕೂ ಸ್ಥಾನಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಲಿದೆ ಎಂದರು. ಚನ್ನಪಟ್ಟಣ ಉಪಚುನಾವಣೆ ನಿರೀಕ್ಷೆಯಲ್ಲಿರುವ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಶಿವಕುಮಾರ್ ಇತ್ತೀಚಿಗೆ ಮತದಾರ ರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ, ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು. ತಮ್ಮ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸುವಂತೆ ಜೆಡಿಎಸ್ ಕಾರ್ಯಕರ್ತರು ಸಾರ್ವಜನಿಕ ಸಭೆಯಲ್ಲಿ ಒತ್ತಡ ಹೇರಿದ್ದರೂ ಕುಮಾರಸ್ವಾಮಿ ಅವರ ಬೇಡಿಕೆಗೆ ಮಣಿದಿರಲಿಲ್ಲ. ಯಾರೇ ಅಭ್ಯರ್ಥಿಯಾಗಲಿ, ಆ ವ್ಯಕ್ತಿಯ ಗೆಲವಿಗೆ ನೀವು ಶ್ರಮಿಸಬೇಕು ಎಂದು ಅವರು ಹೇಳಿದರು.
ಜೆಡಿಎಸ್ ಹಾಗೂ ಬಿಜೆಪಿ ಉನ್ನತ ನಾಯಕರು ಮೈತ್ರಿ ಅಭ್ಯರ್ಥಿಯನ್ನು ನಿರ್ಧರಿಸುವುದರಿಂದ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು. ನಿಖಿಲ್ ಅವರು ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದು, ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ರ್ಯಾಲಿಯಲ್ಲಿ ಮಾತನಾಡಿದ ಅವರು, ತಮ್ಮ ಆರು ಜಿಲ್ಲೆಗಳ ಪ್ರವಾಸದಲ್ಲಿ ಜನರ ನಾಡಿಮಿಡಿತವನ್ನು ಅರ್ಥಮಾಡಿಕೊಂಡಿದ್ದೇನೆ ಮತ್ತು ಹಿಂದಿನ ಸಿಎಂ ಆಗಿದ್ದ ಸಂದರ್ಭದಲ್ಲಿ ಅವರು ಮಾಡಿರುವ ಕೆಲಸಗಳನ್ನು ಪರಿಗಣಿಸಿ ಮತದಾರರು ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡ ಬಯಸಿದ್ದಾರೆ ಎಂದರು.
ಶಿವಕುಮಾರ್ ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಜಿಲ್ಲೆಗೆ ಭೇಟಿ ನೀಡುತ್ತಾರೆ, ಚುನಾವಣೆ ಮುಗಿದ ಮೇಲೆ ಕ್ಷೇತ್ರವನ್ನು ಮರೆತು ಬಿಡುತ್ತಾರೆ ಎಂದು ತಂದೆ-ಮಗ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದ ಜನರು ನಿರಂತರವಾಗಿ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಅವರು ಜೆಡಿಎಸ್ ಪಕ್ಷವನ್ನು ನಿರಾಸೆಗೊಳಿಸುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಅಪಾರ ಕೊಡುಗೆ ನೀಡಿದ್ದು, ಈಗಿನ ಕಾಂಗ್ರೆಸ್ ಸರ್ಕಾರದಲ್ಲಿಯೂ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿ ಅನುದಾನ ಪಡೆದಿದ್ದೇನೆ. ಕಳೆದ ಮೂರು ತಿಂಗಳಲ್ಲಿ 20 ಬಾರಿ ಚನ್ನಪಟ್ಟಣಕ್ಕೆ ಭೇಟಿ ನೀಡಿರುವ ಶಿವಕುಮಾರ್ ಅವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ದಾಖಲೆ ನೀಡಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.
ಕುಮಾರಸ್ವಾಮಿ ಅವರು 1500 ಕೋಟಿ ರೂ.ಗಳ ಜಿಲ್ಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಎಂದು ನಿಖಿಲ್ ತಿಳಿಸಿದರು. ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಚನ್ನಪಟ್ಟಣ ಜನತೆಯನ್ನು ನಿರಾಸೆಗೊಳಿಸಿದ್ದಾರೆ ಎಂಬ ಶಿವಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಕುಮಾರಸ್ವಾಮಿ ಅವರಿಗೆ ಅನಿವಾರ್ಯವಾಗಿತ್ತು. ಆದರೆ ರಾಮನಗರ ಜಿಲ್ಲೆಯ ಜನರ ಬಗ್ಗೆ ಅವರಿಗೆ ಕಾಳಜಿ ಇದೆ” ಎಂದು ಹೇಳಿದರು.
Advertisement