ಉಪ ಚುನಾವಣೆ: ಮೂರಕ್ಕೆ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು; ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಳಸಲಾಗಿದೆ ಎಂದು ಹೇಳಲಾದ 1,200 ಕೋಟಿ ರೂ.ಗಳ ಮೂಲವನ್ನು ಪ್ರಶ್ನಿಸಿದರು.
Siddaramaiah
ಸಿದ್ದರಾಮಯ್ಯANI
Updated on

ಚಿತ್ರದುರ್ಗ: ನವೆಂಬರ್ 13 ರಂದು ನಡೆಯಲಿರುವ ಎಲ್ಲಾ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ಚನ್ನಪಟ್ಟಣ, ಶಿಗ್ಗಾಂವ್, ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು. ಅಹಿಂದ ಸಮುದಾಯದ ಹಣವನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಳಸಲಾಗಿದೆ ಎಂದು ಹೇಳಲಾದ 1,200 ಕೋಟಿ ರೂ.ಗಳ ಮೂಲವನ್ನು ಪ್ರಶ್ನಿಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಅವರನ್ನು ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂಬ ಜೆಡಿಎಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್ ಮೊದಲು ತಮ್ಮ ಮೈತ್ರಿ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ಆಯ್ಕೆ ಮಾಡಲಿ. ಕಾಂಗ್ರೆಸ್ ಶೀಘ್ರದಲ್ಲೇ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ. ನಿರಂತರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು ಪರಿಸ್ಥಿತಿಯನ್ನು ಸುಧಾರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Siddaramaiah
ಚನ್ನಪಟ್ಟಣ ಉಪ ಚುನಾವಣೆ​: BJP MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರರಾಗಿ ಸ್ಪರ್ಧೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com